ಕರ್ನಾಟಕ ಎಸ್ ಎಸ್ ಎಲ್ ಸಿ ಫಲಿತಾಂಶ 2022 Live: sslc.karnataka.gov.in ಹಾಗೂ karresults.nic.in ಈ ವೆಬ್ಸೈಟ್ಗಳಲ್ಲಿ 10ನೇ ತರಗತಿ 2021-2022ನೇ ಸಾಲಿನ ಪರೀಕ್ಷಾ ಫಲಿತಾಂಶ ಮಧ್ಯಾಹ್ನ 12.30ರ ನಂತರ ಲಭ್ಯವಾಗಲಿದೆ.
Karnataka KSEEB SSLC Class 10 Result 2022 Live | ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2021-2022ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಇಂದು (ಮೇ 19ರಂದು) ಬಿಡುಗಡೆ ಮಾಡಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಅವರು ಮಲ್ಲೇಶ್ವರಂದಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಮಧ್ಯಾಹ್ನ 12.30ಕ್ಕೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ ಮಾಡಲಿದ್ದಾರೆ.
ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್ಸೈಟ್ karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಹಾಗೆಯೇ ಮಧ್ಯಾಹ್ನ ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್ಗಳಿಗೆ ಎಸ್ಎಂಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.
ಈ ಬಾರಿ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ ಒಟ್ಟು 8,73,884 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,52,732 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರೆ, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು ಸೇರಿದಂತೆ ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.