ಮಳೆ
Bengaluru Rain: ಕರ್ನಾಟಕದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಯಲ್ಲಿ ಇಂದು ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ತಮಿಳುನಾಡಿನಲ್ಲಿ ಮಳೆ ಹೆಚ್ಚಾಗುತ್ತಿದೆ. ಕರ್ನಾಟಕದ ಮಲೆನಾಡು, ಕರಾವಳಿಯಲ್ಲಿ ಇಂದಿನಿಂದ ಡಿ. 2ರವರೆಗೆ ಮಳೆ ಮುಂದುವರೆಯಲಿದೆ.
ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 3ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ ರಾಜ್ಯಗಳು ಭಯಂಕರ ಮಳೆಗೆ ತತ್ತರಿಸಿವೆ. ಆದರೆ ಮಳೆ ನಿಲ್ಲುವ ಲಕ್ಷಣಗಳಂತೂ ಕಾಣುತ್ತಿಲ್ಲ. ಗುಜರಾತ್ನಲ್ಲಿ ಡಿ.1 ಮತ್ತು 2ರಂದು ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತದ ಹವಾಮಾನ ಇಲಾಖೆ (IMD) ತಿಳಿಸಿದೆ. ಹಾಗೇ, ಗುಜರಾತ್ನ ಆನಂದ್, ಬರೂಚ್, ನವ್ಸರಿ, ವಲ್ಸೇದ್, ಅಮ್ರೇಲಿ ಮತ್ತು ಭವನಗರ ಜಿಲ್ಲೆಗಳಲ್ಲಿ ಡಿಸೆಂಬರ್ 1ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಡಿಸೆಂಬರ್ 2ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಗುಜರಾತ್ನಲ್ಲಿ ಇಂದಿನಿಂದ ಮಳೆ ಪ್ರಾರಂಭವಾಗಲಿದೆ. ಗುಜರಾತ್ನ ಉತ್ತರ ಮತ್ತು ದಕ್ಷಿಣ ಕರಾವಳಿ ತೀರದಲ್ಲಿ ನವೆಂಬರ್ ಇಂದಿನಿಂದ ಡಿಸೆಂಬರ್ 2ರವರೆಗೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಈ ಅಕಾಲಿಕ ಮಳೆಯಿಂದ ರೈತರ ಬೆಳೆಗಳಿಗೆ ತೊಂದರೆಯಾಗಲಿದೆ ಮತ್ತು ಕಟಾವು ಮಾಡಲೂ ಕಷ್ಟವಾಗಲಿದೆ ಎಂದು ಹೇಳಲಾಗಿದೆ.
ಡಿಸೆಂಬರ್ 1 ಮತ್ತು 2ರಂದು ಗುಜರಾತ್ನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. IMD ಗುಜರಾತ್ನ ಆನಂದ್, ಭರೂಚ್, ನವಸಾರಿ, ವಲ್ಸಾದ್, ಅಮ್ರೇಲಿ ಮತ್ತು ಭಾವನಗರ ಜಿಲ್ಲೆಗಳಲ್ಲಿ ಡಿಸೆಂಬರ್ 1ಕ್ಕೆ ಆರೆಂಜ್ ಅಲರ್ಟ್ ಮತ್ತು ಡಿಸೆಂಬರ್ 2 ಕ್ಕೆ ಹಳದಿ ಅಲರ್ಟ್ ಘೋಷಿಸಿದೆ.
ಉತ್ತರ ಮತ್ತು ದಕ್ಷಿಣ ಗುಜರಾತ್ ಕರಾವಳಿಯಲ್ಲಿ ಇಂದಿನಿಂದ ಡಿಸೆಂಬರ್ 2 ರವರೆಗೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಅಕಾಲಿಕ ಮಳೆಯಿಂದಾಗಿ ಕಟಾವು ಹಾಗೂ ಬೆಳೆದು ನಿಂತಿರುವ ಬೆಳೆಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ರೈತರಿಗೆ ಸೂಚಿಸಲಾಗಿದೆ. ಇಂದು ದಕ್ಷಿಣ ಗುಜರಾತ್ನ ಎಲ್ಲಾ ಜಿಲ್ಲೆಗಳಲ್ಲಿ ಅಹಮದಾಬಾದ್, ಆನಂದ್, ಖೇಡಾ, ಪಂಚಮಹಲ್, ದಾಹೋದ್, ಸುರೇಂದ್ರನಗರ, ರಾಜ್ಕೋಟ್, ಪೋರಬಂದರ್, ಜುನಾಗಢ್, ಅಮ್ರೇಲಿಯಲ್ಲಿ ಗುಡುಗು, ಮಿಂಚು ಹಾಗೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಅಮ್ರೇಲಿ, ಜುನಾಗಢ್, ಗಿರ್ ಸೋಮನಾಥ್, ಬೊಟಾಡ್ ಮತ್ತು ಭಾವನಗರ ಸೇರಿದಂತೆ ಸೌರಾಷ್ಟ್ರ ಜಿಲ್ಲೆಗಳ ಆನಂದ್, ಭರೂಚ್, ನವಸಾರಿ, ವಲ್ಸಾದ್ ಸೂರತ್, ಡ್ಯಾಂಗ್ಸ್ ಮತ್ತು ತಾಪಿಯಲ್ಲಿ ಪಂಚಮಹಲ್, ದಾಹೋದ್, ಛೋಟಾ ಉದೇಪುರ್ ಸೇರಿದಂತೆ ಡಿಸೆಂಬರ್ 1ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ತಿಳಿಸಿದೆ.
ಇಂದು ಅಹಮದಾಬಾದ್, ಆನಂದ್, ಖೇಡಾ, ಪಂಚಮಹಲ್, ರಾಜ್ಕೋಟ್ ಸೇರಿ ದಕ್ಷಿಣ ಗುಜರಾತ್ನ ಎಲ್ಲ ಜಿಲ್ಲೆಗಳಲ್ಲೂ ಗುಡುಗು-ಮಿಂಚು ಸಹಿತ ಮಧ್ಯಮ ಪ್ರಮಾಣದ ಮಳೆಯಾಗುವುದು. ಡಿಸೆಂಬರ್ 1ರಂದು ಆನಂದ್, ಬರೂಚ್, ನವ್ಸರಿ, ವಲ್ಸಾದ್ ಸೂರತ್, ಡಂಗ್ಸ್, ಅಮ್ರೇಲಿ, ಜುನಾಗಢ್, ಗಿರ್, ಸೋಮ್ನಾಥ್, ಬೋಟಾಡ್ ಮತ್ತು ಭವನಗರ, ಡಾಹೋಡ್, ಛೋಟಾಉದೇಪುರ್, ಪಂಚಮಹಲ್ಗಳಲ್ಲಿ ಭರ್ಜರಿ ಮಳೆಯಾಗಲಿದೆ. ಹಾಗೇ, ಡಿಸೆಂಬರ್ 2ರಂದು ಬನಸ್ಕಾಂತ, ಸಬರಕಾಂತ, ಅರಾವಳಿ, ಮಹಿಸಾಗರ, ಡಾಂಗ್ಸ್ ಮತ್ತು ತಾಪಿಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.
ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ, ತಿರುವಳ್ಳೂರು, ವಿಲ್ಲುಪುರಂ, ಕಡಲೂರು, ನಾಗಪಟ್ಟಿಣಂ, ತಿರುವರೂರು, ತಂಜಾವೂರು, ಮೈಲಡುತುರೈ ಮತ್ತು ತಮಿಳುನಾಡಿನ ಕಡಲೂರು ಜಿಲ್ಲೆಗಳಲ್ಲಿ ಮತ್ತು ಕಾರೈಕಲ್ ಪ್ರದೇಶದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಮತ್ತು ವಾಯುವ್ಯ ಭಾರತವು ನಡೆಯುತ್ತಿರುವ ಚಳಿಗಾಲದ ನಡುವೆ ಹೊಸ ಮಳೆಯೊಂದಿಗೆ ವರ್ಷದ ಕೊನೆಯ ತಿಂಗಳನ್ನು ಸ್ವಾಗತಿಸಲು ಸಿದ್ಧವಾಗಿದೆ.
Karnataka Weather Today: ನ. 30ರವರೆಗೂ ಕರ್ನಾಟಕದಲ್ಲಿ ಭಾರೀ ಮಳೆ; ವರುಣನ ಆರ್ಭಟಕ್ಕೆ ಆಂಧ್ರ, ತಮಿಳುನಾಡು ತತ್ತರ