Karnataka Weather Today: ಕರಾವಳಿಯಲ್ಲಿ ಇಂದಿನಿಂದ 3 ದಿನ ವರುಣನ ಆರ್ಭಟ; ತಮಿಳುನಾಡಿನಲ್ಲಿ ಇನ್ನೆರಡು ವಾರ ಭಾರೀ ಮಳೆ | Karnataka Weather Today Coastal Karnataka will get Heavy Rain till November 9 Bengaluru Rains


Karnataka Weather Today: ಕರಾವಳಿಯಲ್ಲಿ ಇಂದಿನಿಂದ 3 ದಿನ ವರುಣನ ಆರ್ಭಟ; ತಮಿಳುನಾಡಿನಲ್ಲಿ ಇನ್ನೆರಡು ವಾರ ಭಾರೀ ಮಳೆ

ಮಳೆ

Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತು ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದೆ. ಇಂದಿನಿಂದ ಮಂಗಳವಾರದವರೆಗೆ ಕರಾವಳಿಯ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ.

ಇಂದಿನಿಂದ 3 ದಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಮಳೆ ಹೆಚ್ಚಾಗುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮಂಗಳವಾರ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿರುವ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಬೆಂಗಳೂರು ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಕರ್ನಾಟಕ ಸೇರಿಸಿ ಕೇರಳ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಕರ್ನಾಟಕ, ಕೇರಳ ಮತ್ತು ಲಕ್ಷದ್ವೀಪದಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆಂಧ್ರಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದ ಒಳನಾಡಿನಲ್ಲಿ ಸಾಕಷ್ಟು ವ್ಯಾಪಕವಾದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಮಹಾರಾಷ್ಟ್ರ, ಗೋವಾ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ಮತ್ತೆ ಮಳೆ ಜಾಸ್ತಿಯಾಗಿದ್ದು, ಉತ್ತರ ಕರ್ನಾಟಕದಲ್ಲಿ ಮಾತ್ರ ಮಳೆ ಕಡಿಮೆಯಾಗಲಿದೆ ಎನ್ನಲಾಗುತ್ತಿದೆ. ಉತ್ತರ ಕರ್ನಾಟಕದಲ್ಲಿ ಇಂದು ಮಳೆಯಾಗುವ ಮುನ್ಸೂಚನೆ ಇತ್ತು. ಆದರೆ ಆ ಮಳೆ ರಾಜ್ಯದ ದಕ್ಷಿಣ ಭಾಗಕ್ಕೆ ಮಾತ್ರ ಸೀಮಿತವಾಗಲಿದೆ. ಉತ್ತರ ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ ಅಷ್ಟೇ ಎಂದು ಧಾರವಾಡ ಕೃಷಿ ವಿವಿ ಹವಾಮಾನ ವಿಭಾಗದ ಮುಖ್ಯಸ್ಥ ಡಾ.ಆರ್.ಹೆಚ್.ಪಾಟೀಲ ಹೇಳಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಸಾಧ್ಯತೆ ಕಡಿಮೆ. ಆದರೆ ಅರಬ್ಬಿ ಸಮುದ್ರದಲ್ಲಿ ಮತ್ತೊಂದು ವಾಯುಭಾರ ಕುಸಿತ ಆಗುತ್ತಿದೆ. ಹೀಗಾಗಿ ನವೆಂಬರ್ 11ರ ಬಳಿಕ ಉತ್ತರ ಭಾಗದಲ್ಲಿ ಕೂಡ ಮಳೆಯಾಗಲಿದೆ.

ತಮಿಳುನಾಡಿನಲ್ಲಿ ಮುಂದಿನ 2 ವಾರಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಜೊತೆಗೆ, ಆಂಧ್ರಪ್ರದೇಶ, ಪುದುಚೆರಿ, ಕರ್ನಾಟಕ, ಕೇರಳದಲ್ಲಿ ಕೂಡ ಮಳೆ ಹೆಚ್ಚಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ತುಂತುರು ಮಳೆಯಾಗಲಿದೆ. ಹಾಗೇ, ಲಕ್ಷದ್ವೀಪ, ತೆಲಂಗಾಣ, ರಾಯಲಸೀಮೆ, ಮಾಹೆ, ಒಡಿಶಾದಲ್ಲಿ ಕೂಡ ಮಳೆ ಹೆಚ್ಚಾಗಲಿದೆ. ಇಂದು ಈ ಭಾಗಗಳಲ್ಲಿ ಗಂಟೆಗೆ 50ರಿಂದ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ.

ಇದನ್ನೂ ಓದಿ: ಸ್ವಾತಿ ನಕ್ಷತ್ರದ ಮಳೆ ನೀರಿಗಿದೆ ಔಷಧೀಯ ಮಹತ್ವ; ಉತ್ತರ ಕನ್ನಡ ಜನರ ಪಾಲಿಗಂತೂ ಇದು ಅಮೃತಕ್ಕೆ ಸಮಾನ !

Karnataka Dams Water Level: ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

TV9 Kannada


Leave a Reply

Your email address will not be published. Required fields are marked *