Kotigobba 3: ಇಂದು ಬಿಡುಗಡೆಯಾಗುತ್ತಿಲ್ಲ ‘ಕೋಟಿಗೊಬ್ಬ 3’; ಇನ್ಯಾವಾಗ ಬಿಡುಗಡೆ? ಇಲ್ಲಿದೆ ಮಾಹಿತಿ | Kotigobba 3 movie release is cancelled says Producer Soorappa Babu film will release on October 15th

Kotigobba 3: ಇಂದು ಬಿಡುಗಡೆಯಾಗುತ್ತಿಲ್ಲ ‘ಕೋಟಿಗೊಬ್ಬ 3’; ಇನ್ಯಾವಾಗ ಬಿಡುಗಡೆ? ಇಲ್ಲಿದೆ ಮಾಹಿತಿ

‘ಕೋಟಿಗೊಬ್ಬ 3’ ಚಿತ್ರದಲ್ಲಿ ಸುದೀಪ್

‘ಕೋಟಿಗೊಬ್ಬ 3’ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಬೇಕಿತ್ತು. ಆದರೆ ಅನಿವಾರ್ಯ ಕಾರಣದಿಂದ ಚಿತ್ರ ಬಿಡುಗಡೆಯಾಗುತ್ತಿಲ್ಲ. ಈ ಕುರಿತು ನಿರ್ಮಾಪಕ ಸೂರಪ್ಪ ಬಾಬು ವಿಡಿಯೋ ಮೂಲಕ ಮನವಿ ಮಾಡಿದ್ದು, ನಾಳೆಯಿಂದ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ವಿತರಕರ ಷಡ್ಯಂತ್ರದಿಂದ ಇಂದು ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ನಾಳೆ ಮುಂಜಾನೆ 6 ಗಂಟೆಯಿಂದಲೇ ರಾಜ್ಯಾದ್ಯಂತ ಶೋ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ವಿಡಿಯೋ ಮುಖಾಂತರ ಮಾಹಿತಿ ನೀಡಿರುವ ಅವರು, ‘‘ಇಂದು ಕೋಟಿಗೊಬ್ಬ3 ರಿಲೀಸ್ ಮಾಡಲು ಸಾಧ್ಯವಾಗುತ್ತಿಲ್ಲ. ದಯವಿಟ್ಟು ಎಲ್ಲರೂ ನನ್ನನ್ನ ಕ್ಷಮಿಸಿ. ಕೆಲವರ ಷಡ್ಯಂತರದಿಂದ ಕೋಟಿಗೊಬ್ಬ ರಿಲೀಸ್ ಮಾಡಲು ಸಾಧ್ಯವಾಗಿಲ್ಲ. ಈ ಹಿಂದೆಯೂ ಸಾಕಷ್ಟು ಷಡ್ಯಂತರ ಮಾಡಿದ್ದರು. ಈಗಲೂ ಹಾಗೇ ಆಗಿದೆ. ಸುದೀಪಙ್ ಅಬಿಮಾನಿಗಳು ಕ್ಷಮಿಸಬೇಕು. ನಾಳೆ ಬೆಳಗ್ಗೆ ಆರು ಗಂಟೆಯಿಂದ ಶೋ ಆರಂಭವಾಗಲಿವೆ’’ ಎಂದು ಅವರು ಸಂದೇಶದಲ್ಲಿ ತಿಳಿಸಿದ್ದಾರೆ.

TV9 Kannada

Leave a comment

Your email address will not be published. Required fields are marked *