ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ ನಡೆಯುತ್ತಿದ್ದಾಗ ಆ ದೃಶ್ಯಗಳನ್ನು ಸೆರೆ ಹಿಡಿಯಲು ಪತ್ರಕರ್ತರು ಮುಂದಾದಾಗ ಅವರ ಮೇಲೆ ಮಾಜಿ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ಹಲ್ಲೆ ನಡೆಸಿದ್ದಾರೆ.

ಕೋಲಾರ: ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ -ದೃಶ್ಯ ಸೆರೆ ಹಿಡಿಯುತ್ತಿದ್ದ ಪತ್ರಕರ್ತರ ಮೇಲೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಲ್ಲೆ
ಕೋಲಾರ: ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ (Kolar Congress) ಗಲಾಟೆ ನಡೆಯುತ್ತಿದ್ದಾಗ ಆ ದೃಶ್ಯಗಳನ್ನು ಸೆರೆ ಹಿಡಿಯಲು ಪತ್ರಕರ್ತರು ಮುಂದಾದಾಗ ಅವರ ಮೇಲೆ ಮಾಜಿ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ (KR Ramesh Kumar) ಹಲ್ಲೆ (Attack) ನಡೆಸಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಗಲಾಟೆಯ ದೃಶ್ಯ ಸೆರೆ ಹಿಡಿಯುವಾಗ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಇಬ್ಬರು ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟುಹಬ್ಬದ ಪೂರ್ವಬಾವಿ ಸಭೆಯಲ್ಲಿ ರಮೇಶ್ ಕುಮಾರ್ ಹಾಗೂ ಕೆ.ಎಚ್. ಮುನಿಯಪ್ಪ ಬಣದವರು ಕಿತ್ತಾಟ ನಡೆಸಿದ್ದರು. ಕೈ ಕೈ ಮಿಲಾಯಿಸುವ ಹಂತಕ್ಕೂ ಕಾರ್ಯಕರ್ತರು ತಲುಪಿದ್ದರು. ಬ್ಯಾನರ್ ನಲ್ಲಿ ಮುನಿಯಪ್ಪ ಫೋಟೋ ಇಲ್ಲದಿದಕ್ಕೆ ಬೆಂಬಲಿಗರು ಪ್ರಶ್ನೆ ಮಾಡಿದ್ದರು. ಬಳಿಕ ಎರಡೂ ಬಣದವರ ನಡುವೆ ಮಾತಿಗೆ ಮಾತು ಬೆಳೆದು,ಕಿತ್ತಾಟ ನಡೆಯುತ್ತಿತ್ತು. ಈ ಗಲಾಟೆಯ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿಯುತ್ತಿದ್ದಾಗ ರಮೇಶ್ ಕುಮಾರ್ ಕೋಪಗೊಂಡು ಹಲ್ಲೆ ನಡೆಸಿದ್ದಾರೆ. ಸಭೆಯಲ್ಲಿ ಚೇರಿನಲ್ಲಿ ಕುಳಿತಿದ್ದ ರಮೇಶ್ ಕುಮಾರ್ ಎದ್ದು ಬಂದು ಇಬ್ಬರು ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ, ಕೋಪೋದ್ರಿಕ್ತರಾಗಿದ್ದ ರಮೇಶ್ ಕುಮಾರ್ ಸಭೆಯಿಂದ ದಿಢೀರನೆ ಹೊರ ನಡೆದಿದ್ದಾರೆ. ಹಿರಿಯ ನಾಯಕ ರಮೇಶ್ ಕುಮಾರ್ ಅವರ ಈ ನಡೆಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಕ್ರೋಶ ವ್ಯಕ್ತಪಡಿಸಿದೆ.