KRS Brindavan Garden: ಚಿರತೆ ಭಯಕ್ಕೆ ಕೆಆರ್‌ಎಸ್‌ ಬೃಂದಾವನ ಬಂದ್, 15 ದಿನಗಳಲ್ಲಿ ₹50 ಲಕ್ಷಕ್ಕೂ ಹೆಚ್ಚು ನಷ್ಟ – KRS Brindavan Garden closed from 15 days in fear of leopard more than 50 lakhs loss


ಬೃಂದಾವನ ಬಂದ್ ಮಾಡಿ 15 ದಿನಗಳು ಕಳೆದಿವೆ. ಇದರಿಂದ ಕಾವೇರಿ ನೀರಾವರಿ ನಿಗಮಕ್ಕೆ ₹50 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ.

KRS Brindavan Garden: ಚಿರತೆ ಭಯಕ್ಕೆ ಕೆಆರ್‌ಎಸ್‌ ಬೃಂದಾವನ ಬಂದ್, 15 ದಿನಗಳಲ್ಲಿ ₹50 ಲಕ್ಷಕ್ಕೂ ಹೆಚ್ಚು ನಷ್ಟ

ಕೆಆರ್‌ಎಸ್‌ ಬೃಂದಾವನ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ(Mysuru) ಪ್ರವಾಸಿ ತಾಣವಾಗಿರುವ ಕೆಆರ್‌ಎಸ್‌ ಬೃಂದಾವನದಲ್ಲಿ(KRS Brindavan Garden) ಚಿರತೆ(Leopard) ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕಳೆದ ನ.6ರಿಂದ ಅಂದರೆ ಸುಮಾರು 15 ದಿನಗಳಿಂದ ಬೃಂದಾವನ ಉದ್ಯಾನವನವನ್ನು ಬಂದ್‌ ಮಾಡಲಾಗಿದೆ. ಇದರಿಂದ ಕಾವೇರಿ ನೀರಾವರಿ ನಿಗಮಕ್ಕೆ ₹50 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ. ಜೊತೆಗೆ ಅರ್ಧ ತಿಂಗಳು ಕಳೆದರೂ ಚಿರತೆಯನ್ನು ಹಿಡಿದಿಲ್ಲ ಎಂದು ಅರಣ್ಯ ಇಲಾಖೆ ವಿರುದ್ಧ ಪ್ರವಾಸಿಗರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್ 21ರಿಂದ ಬೃಂದಾವನ ಗಾರ್ಡನ್​ನಲ್ಲಿ ಚಿರತೆ ನಾಲ್ಕು ಬಾರಿ ಕಾಣಿಸಿಕೊಂಡಿದೆ. ಹೀಗಾಗಿ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ನ.6ರಿಂದ ಚಿರತೆ ಸೆರೆ ಹಿಡಿಯುವವರೆಗೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಭಂಧ ಹೇರಿದ್ದರು. ಆದ್ರೆ ಬೃಂದಾವನ ಬಂದ್ ಮಾಡಿ 15 ದಿನಗಳು ಕಳೆದಿವೆ. ಅಲ್ಲದೆ ಬೃಂದಾವನಕ್ಕೆ ವಾರದ ದಿನಗಳಲ್ಲಿ 3 ಸಾವಿರಕ್ಕೂ ಹೆಚ್ಚು ಮಂದಿ ಭೇಟಿ ನೀಡುತ್ತಾರೆ. ಇನ್ನು ವಾರಾಂತ್ಯ, ಸರ್ಕಾರಿ ರಜಾ ದಿನಗಳಲ್ಲಿ 5 ಸಾವಿರಕ್ಕೂ ಜನರು ಭೇಟಿ ನೀಡುತ್ತಾರೆ. ಆದ್ರೆ ಬೃಂದಾವನ ಬಂದ್ ಮಾಡಿರುವುದರಿಂದ ಪ್ರವಾಸಿಗರಿಲ್ಲದೆ ಕಾವೇರಿ ನೀರಾವರಿ ನಿಗಮಕ್ಕೆ ₹50 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ.

TV9 Kannada


Leave a Reply

Your email address will not be published.