ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾಚೇನಹಳ್ಳಿಯ ಡೈರಿ ಸಮೀಪ ನಡೆದಿದೆ.
ಜಯಂತಿ ಗ್ರಾಮದ ಅಂಥೋಣಿ(34) , ಮಂಜುನಾಥ್ (28) ಮೃತ ದುರ್ದೈವಿಗಳು. ಶಿವಮೊಗ್ಗದಿಂದ ಬೆಂಗಳೂರಿಗೆ ಕೆಎಸ್ಆರ್ಟಿಸಿ ಬಸ್ ತೆರಳುತ್ತಿತ್ತು ಎನ್ನಲಾಗಿದ್ದು ಎರಡು ವಾಹನಗಳ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಪ್ರಕರಣ ಕುರಿತು ಭದ್ರಾವತಿ ಸಂಚಾರ ನಿಯಂತ್ರಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.