Kupwara Encounter: ಕಾಶ್ಮೀರದ ಕುಪ್ವಾರಾದಲ್ಲಿ ಎನ್​ಕೌಂಟರ್; ಸೇನಾ ಪಡೆಯಿಂದ ಇಬ್ಬರು ಎಲ್​ಇಟಿ ಉಗ್ರರ ಹತ್ಯೆ | Kupwara Encounter: Two LeT terrorists killed in encounter at Jammu Kashmir Kupwara


Kupwara Encounter: ಕಾಶ್ಮೀರದ ಕುಪ್ವಾರಾದಲ್ಲಿ ಎನ್​ಕೌಂಟರ್; ಸೇನಾ ಪಡೆಯಿಂದ ಇಬ್ಬರು ಎಲ್​ಇಟಿ ಉಗ್ರರ ಹತ್ಯೆ

ಸಾಂದರ್ಭಿಕ ಚಿತ್ರ

Image Credit source: Zee News

ಇಂದು ಮುಂಜಾನೆ ಕಾಶ್ಮೀರದ ಕುಪ್ವಾರಾದಲ್ಲಿ ನಡೆದ ಎನ್​ಕೌಂಟರ್ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಿ ಭಯೋತ್ಪಾದಕ ತುಫೈಲ್ ಸೇರಿದಂತೆ ಎಲ್ಇಟಿ ಸಂಘಟನೆಯ ಇಬ್ಬರು ಉಗ್ರರು ಹತರಾಗಿದ್ದಾರೆ.

ಶ್ರೀನಗರ: ಉತ್ತರ ಕಾಶ್ಮೀರದ ಕುಪ್ವಾರ (Kupwara) ಜಿಲ್ಲೆಯ ಚಕ್ತಾರಸ್ ಕಂಡಿ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಇಂದು ಮುಂಜಾನೆ ಎನ್‌ಕೌಂಟರ್ (Terrorists Encounter) ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಎಲ್​ಇಟಿ ಉಗ್ರರ (LeT Terrorist) ಹತ್ಯೆ ಮಾಡಲಾಗಿದೆ.

” ಎನ್​ಕೌಂಟರ್ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಿ ಭಯೋತ್ಪಾದಕ ತುಫೈಲ್ ಸೇರಿದಂತೆ ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ಇಟಿಯ ಇಬ್ಬರು ಉಗ್ರರು ಹತರಾಗಿದ್ದಾರೆ. ಉಳಿದವರಿಗಾಗಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ,” ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇನ್​ಸ್ಪೆಕ್ಟರ್ ಜನರಲ್ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಉತ್ತರ ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯ ಸೋಪೋರ್‌ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಹಂಜಲ್ಲಾ ಹತನಾದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ. ಕಳೆದ ಕೆಲವು ತಿಂಗಳುಗಳಿಂದ ಕಾಶ್ಮೀರದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳ ಸರಣಿಗಳು ನಡೆಯುತ್ತಿದ್ದು, ಇದರಲ್ಲಿ ಅನೇಕ ಭಯೋತ್ಪಾದಕರು ಮತ್ತು ಉಗ್ರ ಸಂಘಟನೆಗಳ ಕಮಾಂಡರ್‌ಗಳನ್ನು ಹೊಡೆದುರುಳಿಸಲಾಗಿದೆ.

TV9 Kannada


Leave a Reply

Your email address will not be published.