Lata Mangeshkar: ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ಸುಧಾರಣೆ; ವೈದ್ಯರು ಹೇಳಿದ್ದೇನು? | Lata Mangeshkar is still in ICU but her health slight improved says Doctors


Lata Mangeshkar: ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ಸುಧಾರಣೆ; ವೈದ್ಯರು ಹೇಳಿದ್ದೇನು?

ಲತಾ ಮಂಗೇಶ್ಕರ್ (ಸಂಗ್ರಹ ಚಿತ್ರ)

ಮುಂಬೈ: ದೇಶದಲ್ಲಿ ಕೊರೊನಾ (Corona) ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಅನೇಕ ತಾರೆಯರೂ ಸೋಂಕಿಗೆ ತುತ್ತಾಗುತ್ತಿದ್ದಾರೆ. ಇತ್ತೀಚೆಗೆ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (Lata Mangeshkar) ಅವರಿಗೆ ಸೋಂಕು ಕಾಣಿಸಿಕೊಂಡಿತ್ತು. ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ವೈದ್ಯರು ಹೇಳಿದ್ದಾರೆ. ಕೊರೊನಾ ಸೋಂಕು ತಗುಲಿದ್ದ ಕಾರಣ ಲತಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ 92 ವರ್ಷವಾಗಿರುವ ಕಾರಣ ತೀವ್ರ ನಿಗಾ ಘಟಕದಲ್ಲಿರಿಸಿ (ICU) ಚಿಕಿತ್ಸೆ ನೀಡಲಾಗುತ್ತಿದೆ. ‘ಅವರು ಇನ್ನೂ ಐಸಿಯುವಿನಲ್ಲೇ ಇದ್ದಾರೆ. ಆದರೆ ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ’ ಎಂದು ಲತಾಗೆ ಚಿಕಿತ್ಸೆ ನೀಡುತ್ತಿರುವ ಡಾ.ಪ್ರತಿತ್ ಸಮ್ಬಾದಿ ಹೇಳಿದ್ದಾರೆ.

ಎಎನ್​ಐ ಲತಾ ಅವರ ಆರೋಗ್ಯದ ಕುರಿತು ಮಾಹಿತಿ ಹಂಚಿಕೊಂಡಿದೆ. ಲತಾ ಅವರ ಕುಟುಂಬಸ್ಥರು ಮಾಹಿತಿ ನೀಡಿ, ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಐಸಿಯುವಿನಲ್ಲಿ ಇರಿಸಲಾಗಿದೆ. ಅವರ ಖಾಸಗಿತನವನ್ನು ಅಭಿಮಾನಿಗಳು ಗೌರವಿಸಬೇಕು ಎಂದು ಹೇಳಿದ್ದರು. ಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದ ಜನರು, ಗಾಯಕಿ ಬೇಗ ಚೇತರಿಕೆ ಕಂಡು ಮನೆಗೆ ಮರಳುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಾರೈಸಿದ್ದರು.

ಭಾರತ ಕಂಡ ಖ್ಯಾತ ಹಿನ್ನೆಲೆ ಗಾಯಕರಲ್ಲಿ ಲತಾ ಒಬ್ಬರು. ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ ಅವರಿಗೆ 2001ರಲ್ಲಿ ಲಭಿಸಿದೆ. ಇದಲ್ಲದೇ ಪದ್ಮ ಭೂಷಣ, ಪದ್ಮ ವಿಭೂಷಣ, ದಾದಾ ಸಾಹೇಬ್ ಫಾಲ್ಕೆ ಸೇರಿದಂತೆ ಹಲವು ರಾಷ್ಟ್ರೀಯ ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದಾರೆ.

TV9 Kannada


Leave a Reply

Your email address will not be published. Required fields are marked *