ಕ್ರಿಮಿನಾಶಕ ಮಿಶ್ರಿತ ನೀರು ಕುಡಿದು ಮಕ್ಕಳು ಸೇರಿ 15 ಜನರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಕ್ರಿಮಿನಾಶಕ ಮಿಶ್ರಿತ ನೀರು ಕುಡಿದು ಅಸ್ವಸ್ಥಗೊಂಡಿದ್ದ ಮಹಿಳೆ
ಮಂಡ್ಯ: ಕ್ರಿಮಿನಾಶಕ ಮಿಶ್ರಿತ ನೀರು ಕುಡಿದು ಮಕ್ಕಳು ಸೇರಿ 15 ಜನರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಮದ್ದೂರು (Maddur) ತಾಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ. ವಾಂತಿ ಭೇದಿಯಿಂದ ಬಳಲುತ್ತಿರುವ 15 ಜನರನ್ನು ಮಿಮ್ಸ್ (VIMS) ಆಸ್ಪತ್ರಗೆ ದಾಖಲಿಸಲಾಗಿದೆ. ಇನ್ನು ಅಸ್ವಸ್ಥಗೊಂಡ 15 ಜನರು ಬಳ್ಳಾರಿ ಮೂಲದವರು ಎಂದು ತಿಳಿದು ಬಂದಿದೆ.