ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿ, ತೀವ್ರ ಹಲ್ಲೆಗೊಳಗಾಗಿದ್ದ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಬೋರಾಪುರದ ಬಳಿ ನಡೆದಿದೆ. ಪುನೀತ್ ಮೃತ ರ್ದುದೈವಿ.
ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿ, ತೀವ್ರ ಹಲ್ಲೆಗೊಳಗಾಗಿದ್ದ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮದ್ದೂರು (Maddur) ತಾಲೂಕಿನ ಬೋರಾಪುರದ ಬಳಿ ನಡೆದಿದೆ. ಪುನೀತ್ ಮೃತ ರ್ದುದೈವಿ. ಹೌದು ಹಣದ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳವಾಗಿ ಚಿಕ್ಕರಸಿನಕೆರೆ ಗ್ರಾಮದ ನಿವಾಸಿ ಪುನೀತ್ ಮೇಲೆ ಸ್ನೇಹಿತರು ತೀವ್ರ ಹಲ್ಲೆ ನಡೆಸಿದ್ದರು. ಈ ವೇಳೆ ಆತನ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಬಳಿಕ ಆತನನ್ನ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಪುನೀತ್ ಮೈಸೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ಕುರಿತು ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನ ಹತ್ಯೆ
ಬೆಂಗಳೂರಿನ ಮಹದೇವಪುರದಲ್ಲಿ ತಡರಾತ್ರಿ ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನನ್ನ ಹತ್ಯೆ ಮಾಡಲಾಗಿದೆ. ರೇಣುಕುಮಾರ್(24) ಹತ್ಯೆಯಾದ ಯುವಕ. ಏರಿಯಾದಲ್ಲಿ ನಿಂದು ಜಾಸ್ತಿ ಆಗಿದೆ ಎಂದು ಮೃತ ಯುವಕನ ಜೊತೆ ಜಗಳಕ್ಕೆ ಇಳಿದಿದ್ದಾರೆ. ಈ ವೇಳೆ ಚಾಕುವಿನಿಂದ ಪ್ರಶಾಂತ್, ಶ್ರೀಕಾಂತ್, ವಸಂತ್ ಕುಮಾರ್ ಎಂಬುವವರು ಇರಿದಿದ್ದು, ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.