Mann Ki baat in Kannada Live News Updates: ಮನ್ ಕಿ ಬಾತ್ ಭಾಷಣದಲ್ಲಿ ಪ್ರಸ್ತಾಪಿಸಲೆಂದು ದೇಶದ ವಿವಿಧೆಡೆಗಳಿಂದ ಜನರು ಪ್ರಧಾನಿಗೆ ಮಾಹಿತಿ ಕಳುಹಿಸಿದ್ದಾರೆ.

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ
Image Credit source: All India Radio
ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು (ಜುಲೈ 31) ಬೆಳಿಗ್ಗೆ 11 ಗಂಟೆಗೆ ಪ್ರತಿ ತಿಂಗಳ ಜನಪ್ರಿಯ ಕಾರ್ಯಕ್ರಮ ‘ಮನ್ ಕಿ ಬಾತ್’ (Mann Ki Baat) ಮೂಲಕ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಮನ್ ಕಿ ಬಾತ್ ಕಾರ್ಯಕ್ರಮದ 91ನೇ ಆವೃತ್ತಿಯಾಗಿದೆ. ಕಾರ್ಯಕ್ರಮವು ಆಕಾಶವಾಣಿ ಮತ್ತು ದೂರದರ್ಶನದ ಎಲ್ಲ ಕೇಂದ್ರಗಳಿಂದ ಏಕಕಾಲಕ್ಕೆ ಮರು ಪ್ರಸಾರಗೊಳ್ಳಲಿದೆ. ಆಕಾಶವಾಣಿಯ ನ್ಯೂಸ್ ವೆಬ್ಸೈಟ್ ಮತ್ತು ನ್ಯೂಸ್ ಆನ್ ಏರ್ ಮೊಬೈಲ್ ಆ್ಯಪ್ಗಳಲ್ಲಿಯೂ ಈ ಭಾಷಣವನ್ನು ಲೈವ್ ಆಗಿ ಕೇಳಬಹುದು. ಆಕಾಶವಾಣಿ, ದೂರದರ್ಶನ ಮತ್ತು ಪ್ರಧಾನಿ ಕಚೇರಿಯ ಯುಟ್ಯೂಬ್ ಚಾನೆಲ್ಗಳ ಮೂಲಕವೂ ಭಾಷಣವನ್ನು ಆಲಿಸಬಹುದಾಗಿದೆ. ಹಿಂದಿ ಭಾಷಣದ ಲೈವ್ ಪ್ರಸಾರದ ನಂತರ ಪ್ರಾದೇಶಿಕ ಭಾಷೆಗಳಲ್ಲಿಯೂ ಭಾಷಣ ಮರು ಪ್ರಸಾರವಾಗಲಿದೆ.