ದಾವಣಗೆರೆ: ಮಿಸ್-ಸಿ (ಎಂಐಎಸ್​​​-ಸಿ) ರೋಗಕ್ಕೆ ದಾವಣಗೆರೆ ನಗರದ ಎಸ್.ಎಸ್.ಹೈಟೆಕ್ ಆಸ್ಪತ್ರೆಯಲ್ಲಿ ಐದು ವರ್ಷದ ಹೆಣ್ಣು ಮಗು ಸಾವನ್ನಪ್ಪಿದೆ.

ತುಮಕೂರು ಜಿಲ್ಲೆಯ ಶಿರಾ ಮೂಲದ ಮಗು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ಮಗು ಸಾವನ್ನಪ್ಪಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಗು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿತ್ತು ಎನ್ನಲಾಗಿದೆ.

ಮೊದಲು ಮಗುವನ್ನು ಹಿರಿಯೂರು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಎಸ್.ಎಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಎನ್ನಲಾಗಿದೆ.

ಕೋವಿಡ್​ ಸೋಂಕಿಗೆ ಒಳಗಾಗಿರುವ ಮಕ್ಕಳಲ್ಲಿ ಮಿಸ್​-ಸಿ ರೋಗ ಪತ್ತೆಯಾಗುತ್ತಿದೆ. ಕಳೆದ ಮೂರು ತಿಂಗಳಲ್ಲಿ ದಾವಣಗೆರೆಯ ಎಸ್​​.ಎಸ್​​ ಹೈಟೆಕ್​ ಆಸ್ಪತ್ರೆಗೆ ದಾಖಲಾಗಿದ್ದ ಏಳು ಮಕ್ಕಳ ಪೈಕಿ ಐವರು ಗುಣಮುಖರಾಗಿ ಬಿಡುಗಡೆಯಾಗಿದ್ದರು.

The post MIS-C ರೋಗಕ್ಕೆ ದಾವಣಗೆರೆಯಲ್ಲಿ 5 ವರ್ಷದ ಮಗು ಬಲಿ appeared first on News First Kannada.

Source: newsfirstlive.com

Source link