Monkeypox: ಭಾರತದ ಮೊದಲ ಮಂಕಿಪಾಕ್ಸ್ ಸೋಂಕಿತ ಗುಣಮುಖ | Monkeypox: India’s first monkeypox patient cured


ದೇಶದ ಮೊದಲ ಮಂಕಿಪಾಕ್ಸ್ ಸೋಂಕಿತ ವ್ಯಕ್ತಿ ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಇದೀಗ ಮಂಕಿಪಾಕ್ಸ್​ನಿಂದ ಚೇತರಿಸಿಕೊಂಡಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ವೀಣಾ ಜಾರ್ಜ್ ಇಂದು ತಿಳಿಸಿದ್ದಾರೆ. ಕೇರಳದ ಕೊಲ್ಲಂನ 35 ವರ್ಷದ ವ್ಯಕ್ತಿಯನ್ನು ಇಂದು ಡಿಸ್ಚಾರ್ಜ್ ಮಾಡಲಾಗುವುದು ಎಂದು ಅವರು ಹೇಳಿದರು.

ತಿರುವನಂತಪುರಂ: ದೇಶದ ಮೊದಲ ಮಂಕಿಪಾಕ್ಸ್ ಸೋಂಕಿತ ವ್ಯಕ್ತಿ ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಇದೀಗ ಮಂಕಿಪಾಕ್ಸ್​ನಿಂದ ಚೇತರಿಸಿಕೊಂಡಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ವೀಣಾ ಜಾರ್ಜ್ ಇಂದು ತಿಳಿಸಿದ್ದಾರೆ. ಕೇರಳದ ಕೊಲ್ಲಂನ 35 ವರ್ಷದ ವ್ಯಕ್ತಿಯನ್ನು ಇಂದು ಡಿಸ್ಚಾರ್ಜ್ ಮಾಡಲಾಗುವುದು ಎಂದು ಅವರು ಹೇಳಿದರು.

ಇದು  ದೇಶದಲ್ಲಿ ಮೊದಲ ಪತ್ತೆಯಾದ  ಮಂಕಿಪಾಕ್ಸ್ ಪ್ರಕರಣವಾಗಿರುವುದರಿಂದ, ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಎನ್‌ಐವಿ) ಸೂಚನೆಯಂತೆ 72 ಗಂಟೆಗಳ ಮಧ್ಯಂತರದಲ್ಲಿ ಎರಡು ಬಾರಿ ಪರೀಕ್ಷೆಗಳನ್ನು ನಡೆಸಲಾಯಿತು. ಅವರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಅವರ ಕುಟುಂಬದ ಸದಸ್ಯರ ಪರೀಕ್ಷೆಯ ಫಲಿತಾಂಶವೂ ನಕಾರಾತ್ಮಕವಾಗಿದೆ ಎಂದು ಸಚಿವರು ಹೇಳಿದರು.

TV9 Kannada


Leave a Reply

Your email address will not be published. Required fields are marked *