Moto G22: ಭರ್ಜರಿ ಕ್ಯಾಮೆರಾ, ಬ್ಯಾಟರಿಯ ಬಜೆಟ್ ಸ್ಮಾರ್ಟ್​​ಫೋನ್ ಮೋಟೋ G22 ಮಾರಾಟ ಆರಂಭ | Moto G22 priced at just Rs 10999 Sale start today vial Flipkart check bank offer and specs


Moto G22: ಭರ್ಜರಿ ಕ್ಯಾಮೆರಾ, ಬ್ಯಾಟರಿಯ ಬಜೆಟ್ ಸ್ಮಾರ್ಟ್​​ಫೋನ್ ಮೋಟೋ G22 ಮಾರಾಟ ಆರಂಭ

Moto G22

ಭಾರತದಲ್ಲೀಗ ಬಜೆಟ್ ಬೆಲೆಯ ಸ್ಮಾರ್ಟ್​​ಫೋನ್​ಗಳಿಗೆ (Budget Smartphone) ಭರ್ಜರಿ ಬೇಡಿಕೆ ಶುರುವಾಗಿದೆ. ಮೊದಲ ಬಾರಿಗೆ ಮೊಬೈಲ್ ಕೊಂಡುಕೊಳ್ಳುವವರ ಮೊದಲ ಆಯ್ಕೆ ಕಡಿಮೆ ಬೆಲೆಯ ಅತ್ಯುತ್ತಮ ಫೋನ್ ಆಗಿದೆ. ಇದನ್ನೇ ಟಾರ್ಗೆಟ್ ಮಾಡಿರುವ ಮೊಬೈಲ್ ಕಂಪನಿಗಳು ಬಜೆಟ್ ಬೆಲೆಗೆ ಆಕರ್ಷಕ ಸ್ಮಾರ್ಟ್​​ಫೋನ್​ಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದೆ. ಈ ಪೈಕಿ ಮೊನ್ನೆಯಷ್ಟೆ ಪ್ರಸಿದ್ಧ ಮೋಟೋರೊಲಾ (Motorola) ಕಂಪನಿ ಭಾರತದಲ್ಲಿ ತನ್ನ ಹೊಸ ಮೋಟೋ ಜಿ22 (Moto G22) ಸ್ಮಾರ್ಟ್​​ಫೋನ್ ಅನ್ನು ಅನಾವರಣ ಮಾಡಿತ್ತು. ಅತ್ಯಂತ ಕಡಿಮೆ ಬೆಲೆಗೆ ಲಭ್ಯವಿರುವ ಈ ಫೋನ್ ಇಂದಿನಿಂದ ಖರೀದಿಗೆ ಲಭ್ಯವಿದೆ. ಇದರಲ್ಲಿ ಮೀಡಿಯಾಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ ಇದೆ. ಅಚ್ಚರಿ ಎಂಬಂತೆ ಕ್ವಾಡ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50MP ಸೆನ್ಸಾರ್‌ ನೀಡಲಾಗಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಬೆಲೆ-ಆಫರ್ ಏನು ?:

ಮೋಟೋ G22 ಭಾರತದಲ್ಲಿ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ರಿಲೀಸ್ ಆಗಿದೆ. ಇದರ 4GB RAM ಮತ್ತು 64GB ಸ್ಟೋರೆಜ್ ಸಾಮರ್ಥ್ಯಕ್ಕೆ ಕೇವಲ 10,999 ರೂ. ನಿಗದಿ ಮಾಡಲಾಗಿದೆ. ಬ್ಯಾಂಕ್ ಆಫರ್​​ನಲ್ಲಿ ರಿಯಾಯಿ ಕೂಡ ನೀಡಲಾಗಿದ್ದು 9,999 ರೂ. ಗೆ ನಿಮ್ಮದಾಗಿಸಬಹುದು. ಈ ಆಫರ್ ಏಪ್ರಿಲ್ 13 ಮತ್ತು ಏಪ್ರಿಲ್ 14 ರಂದು ಮಾತ್ರ ಲಭ್ಯವಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​​ ಮೂಲಕ ಇಂದಿನಿಂದ ಇದು ಖರೀದಿಗೆ ಸಿಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅನ್ನು ಯುರೋಪಿಯನ್ ಮಾರುಕಟ್ಟೆಗಳಲ್ಲಿ ಅಧಿಕೃತಗೊಳಿಸಲಾಗಿತ್ತು. ಯುರೋಪ್‌ನಲ್ಲಿ ಮೋಟೋ G22 ಫೋನ್‌ ಯುರೋ 169.99 ಬೆಲೆಯಲ್ಲಿ ಬಿಡುಗಡೆ ಮಾಡಲಾಗಿದೆ. ಈ ಫೋನ್‌ ನೀಲಿ ಮತ್ತು ಕಪ್ಪು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.

ಏನು ವಿಶೇಷತೆ?:

ಮೋಟೋ G22 ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ IPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಹೊಂದಿರಲಿದೆ. ಇದಲ್ಲದೆ ಈ ಡಿಸ್‌ಪ್ಲೇ 84.2% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದ್ದು, ರಚನೆಯ ಅನುಪಾತ 20:9 ಇಂದ ಕೂಡಿದೆ. ಮೀಡಿಯಾಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ನೀಡಿದೆ.

ಆಕರ್ಷಕವಾದ ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇಷ್ಟು ಕಡಿಮೆ ಬೆಲೆಯಲ್ಲಿ 8 ಮೆಗಾಫಿಕ್ಸೆಲ್​ನ ಆಲ್ಟ್ರಾವೈಡ್ ಲೆನ್ಸ್ ಸಾಮರ್ಥ್ಯವಿರುವ ಫೋನ್ ಬರುತ್ತಿರುವುದು ಇದೇ ಮೊದಲು. ಅಲ್ಲದೆ ರಿಯರ್‌ ಕ್ಯಾಮೆರಾ ಸೆಟಪ್ 30fps ಫ್ರೇಮ್ ರೇಟ್‌ನಲ್ಲಿ ಫುಲ್‌ HD ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಹೊಂದಿದೆ.

ಮೋಟೋ G22 ಸ್ಮಾರ್ಟ್‌ಫೋನ್‌ 20W ಟರ್ಬೋಚಾರ್ಜಿಂಗ್ ಬೆಂಬಲಿಸುವ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಈ ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಸಹ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊ ಮೀಟರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಕಂಪಾಸ್‌ ಅನ್ನು ಒಳಗೊಂಡಿದೆ.

WhatsApp : ವಾಟ್ಸ್​ಆ್ಯಪ್​ನಲ್ಲಿ ಚಾಟ್ ಅನ್ನು ಹೈಡ್ ಮಾಡುವ ಟ್ರಿಕ್ ನಿಮಗೆ ಗೊತ್ತೇ?: ಇಲ್ಲಿದೆ ನೋಡಿ

Amazon Fab Phones Fest sale: ಕೇವಲ 6,299 ರೂ. ಗೆ ಮಾರಾಟವಾಗುತ್ತಿದೆ ಈ ​​ಫೋನ್: ಆಫರ್ ಮಿಸ್ ಮಾಡ್ಬೇಡಿ

TV9 Kannada


Leave a Reply

Your email address will not be published.