ಮೋಟೋರೊಲಾ ಕಂಪನಿ ಸದ್ದಿಲ್ಲದೆ ಭಾರತದಲ್ಲಿ ತನ್ನ ಹೊಸ ಮೋಟೋ ಜಿ32 (Moto G32) ಸ್ಮಾರ್ಟ್ಫೋನ್ ಅನ್ನು ಅನಾವರಣ ಮಾಡಿದೆ. ಇದು ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಆಕರ್ಷಕ ಕ್ಯಾಮೆರಾ, ಬ್ಯಾಟರಿ ಕೂಡ ನೀಡಲಾಗಿದೆ.

Moto G32
ಮೋಟೋರೊಲಾ (Motorola) ಕಂಪನಿಯ ಸ್ಮಾರ್ಟ್ಫೋನ್ಗಳಿಗೆ ಈಗ ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಬಜೆಟ್ ಬೆಲೆಯ ಜೊತೆಗೆ ಹೈರೇಂಜ್ ಮಾದರಿಯಲ್ಲಿ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು (Smartphone) ಬಿಡುತ್ತಿರುವುದು ಇದಕ್ಕೆ ಕಾರಣ ಎನ್ನಬಹುದು. ಈಗಾಗಲೇ 200 ಮೆಗಾಫಿಕ್ಸೆಲ್ ಕ್ಯಾಮೆರಾ ಸ್ಮಾರ್ಟ್ಫೋನ್ ಅನ್ನು ತಯಾರು ಮಾಡುವ ಪ್ರಕ್ರಿಯೆಯಲ್ಲಿ ಮೋಟೋ ಬ್ಯುಸಿಯಾಗಿದೆ. ಹೀಗಿರುವಾಗ ಇದರ ನಡುವೆ ಮೋಟೋರೊಲಾ ಕಂಪನಿ ಸದ್ದಿಲ್ಲದೆ ಭಾರತದಲ್ಲಿ ತನ್ನ ಹೊಸ ಮೋಟೋ ಜಿ32 (Moto G32) ಸ್ಮಾರ್ಟ್ಫೋನ್ ಅನ್ನು ಅನಾವರಣ ಮಾಡಿದೆ. ಇದು ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಆಕರ್ಷಕ ಕ್ಯಾಮೆರಾ, ಬ್ಯಾಟರಿ ಕೂಡ ನೀಡಲಾಗಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು? ಏನೆಲ್ಲ ಫೀಚರ್ಸ್ ಇದೆ ಎಂಬುದನ್ನು ನೋಡೋಣ.