Naatu Naatu Song: ‘ಆರ್​ಆರ್​ಆರ್​’ ಚಿತ್ರದ ‘ಹಳ್ಳಿ ನಾಟು..’ ಹಾಡಿನಲ್ಲಿ ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಮಸ್ತ್​ ಡ್ಯಾನ್ಸ್​ | Naatu Naatu Lyrical from RRR movie starring Jr NTR and Ram Charan creates huge buzz


Naatu Naatu Song: ‘ಆರ್​ಆರ್​ಆರ್​’ ಚಿತ್ರದ ‘ಹಳ್ಳಿ ನಾಟು..’ ಹಾಡಿನಲ್ಲಿ ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಮಸ್ತ್​ ಡ್ಯಾನ್ಸ್​

ರಾಮ್​ ಚರಣ್​, ಜ್ಯೂ. ಎನ್​ಟಿಆರ್​

ಬಹುನಿರೀಕ್ಷಿತ ‘ಆರ್​ಆರ್​ಆರ್​’ ಸಿನಿಮಾದ (RRR Movie) ಕ್ರೇಜ್​ ದಿನದಿನವೂ ಹೆಚ್ಚುತ್ತಿದೆ. ರಾಜಮೌಳಿ (Rajamouli) ನಿರ್ದೇಶನದ ಈ ಚಿತ್ರದಲ್ಲಿ ರಾಮ್​ ಚರಣ್ (Ram Charan)​ ಮತ್ತು ಜ್ಯೂ. ಎನ್​ಟಿಆರ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ನಾಯಕಿಯಾಗಿ ಆಲಿಯಾ ಭಟ್​ ಅಭಿನಯಿಸಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​ ಮತ್ತು ಪೋಸ್ಟರ್​ಗಳು ಭಾರಿ ಹೈಪ್​ ಸೃಷ್ಟಿ ಮಾಡಿವೆ. ಈಗ ಈ ಸಿನಿಮಾದಿಂದ ಹೊಸದೊಂದು ಲಿರಿಕಲ್​ ಸಾಂಗ್​ ರಿಲೀಸ್​ ಆಗಿದೆ. ‘ನಾಟು ನಾಟು..’ ಗೀತೆಯು (Naatu Naatu Song) 5 ಭಾಷೆಗಳಲ್ಲಿ ಮೂಡಿಬಂದಿದೆ. ಕನ್ನಡ ವರ್ಷನ್​ ‘ಹಳ್ಳಿ ನಾಟು..’ (Halli Naatu) ಹಾಡು ಕೂಡ ಭರ್ಜರಿ ಸೌಂಡು ಮಾಡುತ್ತಿದೆ. ಡ್ಯಾನ್ಸ್​ ವಿಚಾರದಲ್ಲಿ ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ (Jr NTR) ಒಬ್ಬರಿಗೊಬ್ಬರು ಪೈಪೋಟಿ ನೀಡಿದ್ದಾರೆ. ಅಭಿಮಾನಿಗಳಿಂದ ಈ ಗೀತೆಗೆ ಸಖತ್​ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಿಡುಗಡೆಯಾಗ ಕೆಲವೇ ನಿಮಿಷಗಳಲ್ಲಿ ಲಕ್ಷಗಟ್ಟಲೆ ವೀವ್ಸ್​ ಪಡೆದುಕೊಂಡಿದೆ.

ನೈಜ ಘಟನೆ ಆಧರಿಸಿ ‘ಆರ್​ಆರ್​ಆರ್​’ ಸಿನಿಮಾ ತಯಾರಾಗುತ್ತಿದೆ. ಖ್ಯಾತ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಿಂದೆ ‘ದೋಸ್ತಿ..’ ಹಾಡು ಬಿಡುಗಡೆ ಆಗಿತ್ತು. ಈಗ ಎರಡನೇ ಗೀತೆ ‘ಹಳ್ಳಿ ನಾಟು..’ ಎಲ್ಲೆಲ್ಲೂ ರಾರಾಜಿಸುತ್ತಿದೆ. ಈ ಹಾಡಿನಿಂದಾಗಿ ಚಿತ್ರದ ಮೇಲಿನ ಕ್ರೇಜ್​ ಹೆಚ್ಚುವಂತಾಗಿದೆ. 2022ರ ಜ.7ರಂದು ಈ ಸಿನಿಮಾ ಅದ್ದೂರಿಯಾಗಿ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಆ ದಿನಕ್ಕಾಗಿ ಸಿನಿಪ್ರಿಯರು ಕಾದು ಕುಳಿತಿದ್ದಾರೆ.

ಕೆಲವೇ ದಿನಗಳ ಹಿಂದೆ ಈ ಸಿನಿಮಾದ ಟೀಸರ್​ ಈಗ ಬಿಡುಗಡೆ ಆಗಿತ್ತು. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಈ ಟೀಸರ್​ 37 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿತ್ತು. ಭಾರತೀಯ ಸಿನಿಮಾ ಜಗತ್ತಿನಲ್ಲಿ ಮಾಂತ್ರಿಕ ಎಂದೇ ಕರೆಸಿಕೊಳ್ಳುವ ನಿರ್ದೇಶಕ ರಾಜಮೌಳಿ ಅವರು ‘ಆರ್​ಆರ್​ಆರ್​’ ಸಿನಿಮಾ ಮೂಲಕ ಮತ್ತೆ ಮೋಡಿ ಮಾಡುವುದು ಖಚಿತ ಎಂಬುದಕ್ಕೆ ಈ ಟೀಸರ್​ ಸಾಕ್ಷಿ ಒದಗಿಸಿದೆ. ಅದ್ದೂರಿ ಸೆಟ್​ಗಳು, ಭರ್ಜರಿ ಆ್ಯಕ್ಷನ್​ ದೃಶ್ಯಗಳು, ಅತ್ಯಾಧುನಿಕ ವಿಎಫ್​ಎಕ್ಸ್​ ಸೇರಿದಂತೆ ಹಲವು ಅಂಶಗಳು ‘ಆರ್​ಆರ್​ಆರ್​’ ಸಿನಿಮಾದಲ್ಲಿ ಹೈಲೈಟ್​ ಆಗಲಿವೆ.

ದೇಶಭಕ್ತಿಯ ಕಥಾಹಂದರವನ್ನು ಹೊಂದಿರುವ ಈ ಚಿತ್ರದಲ್ಲಿ ಜೂ.ಎನ್​ಟಿಆರ್ ಕೋಮರಂ ಭೀಮ್ ಪಾತ್ರದಲ್ಲಿ ಕಾಣಿಸಿಕೊಂಡರೆ, ರಾಮ್​ ಚರಣ್ ತೇಜ ಅಲ್ಲುರಿ ಸೀತಾರಾಮ ರಾಜು ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಬಾಲಿವುಡ್​ ನಟ ಅಜಯ್​ ದೇವಗನ್​ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ:

ಮೋಹನ್​ಲಾಲ್ ‘ಮರಕ್ಕರ್​’ ಚಿತ್ರದ ಕ್ರಾಂತಿಕಾರಕ ನಿರ್ಧಾರ; ‘ಆರ್​ಆರ್​ಆರ್​’, ‘ಕೆಜಿಎಫ್​ 2’ ಭವಿಷ್ಯವೇನು?

RRR Teaser: 45 ಸೆಕೆಂಡ್​ನಲ್ಲಿ ಅದ್ಭುತ ತೋರಿಸಿದ ರಾಜಮೌಳಿ; ಆರ್​ಆರ್​ಆರ್​ ಟೀಸರ್​ನಲ್ಲಿ ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಅಬ್ಬರ

TV9 Kannada


Leave a Reply

Your email address will not be published. Required fields are marked *