National Cancer Awareness Day 2021: ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನದ ಮಹತ್ವ ಮತ್ತು ಈ ವರ್ಷದ ಥೀಮ್ ಏನು ಗೊತ್ತಾ? | National cancer awareness day 2021 history importance and theme


National Cancer Awareness Day 2021: ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನದ ಮಹತ್ವ ಮತ್ತು ಈ ವರ್ಷದ ಥೀಮ್ ಏನು ಗೊತ್ತಾ?

ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ 2021

ಮಾರಣಾಂತಿಕ ಕಾಯಿಲೆಯಾದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ನವೆಂಬರ್ 7ನೇ ತಾರೀಕಿನಂದು ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನವನ್ನಾಗಿ ಆಚರಿಸಲಾಗುತ್ತದೆ. 2014ರಲ್ಲಿ ರಾಷ್ಟ್ರೀಯ ಜಾಗೃತಿ ದಿನ ಆಚರಣೆ ಮೊದಲ ಬಾರಿಗೆ ನಡೆಸಲಾಯಿತು. ಕ್ಯಾನ್ಸರ್ ವಿರುದ್ಧ ಹೋರಾಟದ ವಿಜ್ಞಾನಿಯಾದ ಕ್ಯೂರಿ ಅವರ ಜನ್ಮದಿನದ ಪ್ರಯುಕ್ತ ಈ ದಿನವನ್ನು ಆಚರಿಸಲಾಗುತ್ತದೆ.

ಭಾರತದಲ್ಲಿ ಪ್ರತೀ ವರ್ಷ ನವೆಂಬರ್ 7ರಂದು ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ. ಸಾಮಾನ್ಯ ಜನರಿಗೆ ಕ್ಯಾನ್ಸರ್ ತಡೆಗಟ್ಟುವ ಕುರಿತಾದ ಹೆಚ್ಚಿನ ಜಾಗೃತಿ ಮೂಡಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ದೇಶದಲ್ಲಿ ಕ್ಯಾನ್ಸರ್ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲು ರಾಷ್ಟ್ರೀಯ ಕ್ಯಾನ್ಸರ್ ನಿಯಂತ್ರಣ ಕಾರ್ಯಕ್ರಮವನ್ನು 1975ರಲ್ಲಿ ಪ್ರಾರಂಭಿಸಲಾಯಿತು.

ಭಾರತದಲ್ಲಿ ಪ್ರತಿ ವರ್ಷ ಸುಮಾರು 1.1 ಮಿಲಿಯನ್ ಹೊಸ ಪ್ರಕರಣಗಳು ವರದಿಯಾಗುತ್ತಿವೆ. ಮೂರನೇ ಎರಡರಷ್ಟು ಪ್ರಕರಣಗಳು ತೀರಾ ಗಂಭೀರ ಸ್ಥಿತಿಯಲ್ಲಿ ಕಂಡು ಬರುತ್ತಿವೆ. ಶ್ವಾಸಕೋಶದ ಕ್ಯಾನ್ಸರ್ ಮತ್ತು ಬಾಯಿಯ ಕುಹರದ ಕ್ಯಾನ್ಸರ್ ಪುರುಷರಲ್ಲಿ ಹೆಚ್ಚು ಕಂಡು ಬರುತ್ತಿದೆ. ಆದರೆ ಸ್ಲನ ಕ್ಯಾನ್ಸರ್ ಮತ್ತು ಬಾಯಿಯ ಕುಹರದ ಕ್ಯಾನ್ಸರ್ ಮಹಿಳೆಯರಲ್ಲಿ ಹೆಚ್ಚಿನ ಸಂಖ್ಯೆಯ ಕ್ಯಾನ್ಸರ್ ಪ್ರಕರಣಗಳಿಗೆ ಕಾರಣವಾಗಿದೆ.

ಆರಂಭಿಕ ಹಂತಗಳಲ್ಲಿ ಕ್ಯಾನ್ಸರ್​ಅನ್ನು ಮೊದಲೇ ಪತ್ತೆ ಹಚ್ಚುವುದರಿಂದ ಸಾವಿನ ಸಂಖ್ಯೆಯನ್ನು ಗಣನೀಯವಾಗಿ ಕಡಿಮೆ ಮಾಡಬಹುದು. ಈ ಬಗ್ಗೆ ತಿಳಿಹೇಳಲು ಮತ್ತು ಕ್ಯಾನ್ಸರ್ ರೋಗ ತಡೆಗಟ್ಟುವಿಕೆಯ ಬಗ್ಗೆ ಜಾಗೃತಿ ಮೂಡಿಸುವ ದೃಷ್ಟಿಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಸರ್ಕಾರಿ ಆಸ್ಪತ್ರೆಗಳು, ಚಿಕಿತ್ಸಾಲಯಗಳಿಗೆ ಭೇಟಿ ನೀಡಲು ಜನರನ್ನು ಪ್ರೋತ್ಸಾಹಿಸಲಾಗುತ್ತದೆ. ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ಆರೋಗ್ಯ ಕಾಳಜಿ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತದೆ.

ಇದನ್ನೂ ಓದಿ:

ಸ್ತನ ಕ್ಯಾನ್ಸರ್ ಬಗ್ಗೆ ನಿರ್ಲಕ್ಷ್ಯ ಬೇಡ; ಈ ರೋಗಲಕ್ಷಣಗಳು ನಿಮ್ಮಲ್ಲಿ ಕಂಡು ಬಂದರೆ ತಕ್ಷಣವೇ ಎಚ್ಚರವಹಿಸಿ

ಕ್ಯಾನ್ಸರ್ ವಿರುದ್ಧ ಹೋರಾಡುವ ಶಕ್ತಿಯಿರುವ ದಾಳಿಂಬೆ ಹಣ್ಣು ಹೃದಯ ಆರೋಗ್ಯದ ಜೊತೆಗೆ ಬಿಪಿ ಸಮಸ್ಯೆ ನಿಯಂತ್ರಣಕ್ಕೆ ಒಳ್ಳೆಯದು

TV9 Kannada


Leave a Reply

Your email address will not be published. Required fields are marked *