ಬೆಂಗಳೂರು: ಬೆಂಗಳೂರು ವಲಯ ಎನ್​ಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ ₹15 ಕೋಟಿ ಬೆಲೆಬಾಳುವ ಗಾಂಜಾವನ್ನ ವಶಕ್ಕೆ ಪಡೆದಿದ್ದಾರೆ.

ಹೈದರಾಬಾದ್​ನ ಪೆದ್ದ ಅಂಬರ್​ಪೇಟ್ ಟೋಲ್ ಪ್ಲಾಜಾ ಬಳಿ ಟ್ರಕ್​ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಲಾಗಿದ್ದು 2 ಟನ್​ಗಿಂತಲೂ ಹೆಚ್ಚಿನ ಗಾಂಜಾವನ್ನ ಸೀಜ್ ಮಾಡಲಾಗಿದೆ. ಒಟ್ಟು 1,080 ಪ್ಯಾಕೆಟ್​ಗಳಲ್ಲಿ ಗಾಂಜಾವನ್ನ ಸಾಗಾಟ ಮಾಡಲಾಗ್ತಿತ್ತು.. ಒಂದೊಂದು ಪ್ಯಾಕೆಟ್​ನಲ್ಲಿ 2 ಕೆ.ಜಿ ಗಾಂಜಾ ಶೇಖರಿಸಲಾಗಿತ್ತು ಎನ್ನಲಾಗಿದೆ.

ಹೈದರಾಬಾದ್​ನಿಂದ ಪುಣೆ, ಮುಂಬೈ ಸೇರಿದಂತೆ ಹಲವು ಕಡೆಗೆ ಈ ಗ್ಯಾಂಗ್ ಗಾಂಜಾ ಸಪ್ಲೈ ಮಾಡುತ್ತಿತ್ತಂತೆ. ಸದ್ಯ ಮಹಾರಾಷ್ಟ್ರ ಮೂಲದ ಕೆ.ಕಾಳೆ, ಡಿ. ದುರಾಲ್ಕರ್ ಎಂಬುವವರು ಸೇರಿದಂತೆ ಒಟ್ಟು ನಾಲ್ವರನ್ನ ಬಂಧಿಸಲಾಗಿದೆ. ಎನ್​ಸಿಬಿ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮಟ್ಟದ ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.

The post NCB ಇತಿಹಾಸದಲ್ಲೇ ಅತೀ ದೊಡ್ಡ ಬೇಟೆ: 2 ಟನ್​ಗೂ ಹೆಚ್ಚು ಗಾಂಜಾ ವಶಕ್ಕೆ appeared first on News First Kannada.

Source: newsfirstlive.com

Source link