ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಅಕ್ರಮ ಕೇಳಿ ಬಂದ್ರೆ ಅಧಿಕಾರಿಗಳೇ ಹೊಣೆ- ಸಿಎಂ ಎಚ್ಚರಿಕೆ

ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಅಕ್ರಮ ಕೇಳಿ ಬಂದ್ರೆ ಅಧಿಕಾರಿಗಳೇ ಹೊಣೆ- ಸಿಎಂ ಎಚ್ಚರಿಕೆ

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಏನೇ ಅಕ್ರಮ ಕೇಳಿ ಬಂದರೂ ಅಧಿಕಾರಿಗಳನ್ನು ಗುರಿ ಮಾಡಲಾಗುತ್ತದೆ ಎಂದು ಸಿಎಂ ಬಿಎಸ್​ ಯಡಿಯೂರಪ್ಪ ಎಚ್ಚರಿಕೆಯನ್ನ ನೀಡಿದ್ದಾರೆ.

ಮಾಧ್ಯಮಗಳ ಜೊತೆ ಭದ್ರಾ ಮೇಲ್ದಂಡೆ ಯೋಜನೆಗಳ ಬಗ್ಗೆ ಮಾತನಾಡಿ.. ಎತ್ತಿನ ಹೊಳೆ, ಭದ್ರಾ ಮೇಲ್ದಂಡೆ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುಮೋದನೆ ಸಿಗಬೇಕಿದೆ. ಇದರ ಬಗ್ಗೆ ಕೇಂದ್ರದ ಜತೆ ಚರ್ಚೆ ಮಾಡ್ತೇನೆ. ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಯಾವುದೇ ಅಕ್ರಮ ನಡೆಯಬಾರದರು. ಒಂದು ವೇಳೆ ಅಂತ ಅಕ್ರಮಗಳ ಬಗ್ಗೆ ಕೇಳಿ ಬಂದರೆ ಅಧಿಕಾರಿಗಳನ್ನು ಗುರಿ ಮಾಡಲಾಗುತ್ತದೆ ಎಂದು ಎಚ್ಚರಿಕೆಯನ್ನ ನೀಡಿದ್ದಾರೆ.

ನೀತಿ ಆಯೋಗದ ಸುಸ್ಥಿರ ಅಭಿವೃದ್ಧಿ ಸೂಚ್ಯಂಕದಲ್ಲಿ ರಾಜ್ಯದ ಅಂಕ ಹೆಚ್ಚಿದೆ ಅಂತಾ ಮಾಹಿತಿ ನೀಡಿದರು. ಇನ್ನು ಮಾಲ್ ಅಸೋಸಿಯೇಷನ್‌ನವರು ಭೇಟಿ ಮಾಡಿದ್ರು. ಕೆಲವು ಷರತ್ತುಗಳನ್ನು ವಿಧಿಸಿ ಅವಕಾಶ ಕೊಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಸಂಪುಟ ಸಚಿವರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ. ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದರು.

The post ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಅಕ್ರಮ ಕೇಳಿ ಬಂದ್ರೆ ಅಧಿಕಾರಿಗಳೇ ಹೊಣೆ- ಸಿಎಂ ಎಚ್ಚರಿಕೆ appeared first on News First Kannada.

Source: newsfirstlive.com

Source link