ಹಿರಿಯ ನಟಿ ಕವಿತಾ ಅವರ ಪತಿ-ಪುತ್ರ ಇಬ್ಬರು ಸೋಂಕಿಗೆ ಬಲಿ

ಬೆಂಗಳೂರು: ಬಹುಭಾಷಾ ನಟಿ ಕವಿತಾ ಅವರ ಮಗ, ಪತಿ ಇಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.

ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ ಹಿರಿಯ ನಟಿ ಕವಿತಾ ಅವರು ಕೈ ಹಿಡಿದ ಪತಿ ದಶರಥ ರಾಜ್ ಮತ್ತು ಹೆತ್ತ ಮಗ ಸಂಜಯ್ ರೂಪ್ ಅವರನ್ನು ಕಳೆದುಕೊಂಡ ನಟಿ ಕವಿತಾ ದುಃಖದ ಮಡುವಿನಲ್ಲಿದ್ದಾರೆ. ಇದನ್ನೂ ಓದಿ: ಸಿಎಂ ಸ್ಥಾನ ಎಂಬ ವೈರಸ್‍ಗೆ ಕೈ ಹೈಕಮಾಂಡ್ ವ್ಯಾಕ್ಸಿನ್ ನೀಡಬೇಕು: ಶ್ರೀರಾಮುಲು

ಮಗ ಸಂಜಯ್ ರೂಪ್ ಎರಡು ವಾರಗಳ ಹಿಂದೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಇದೇ ಸಂದರ್ಭದಲ್ಲಿ ಕವಿತಾ ಪತಿಗೂ ಕೊವಿಡ್ ಕಾಣಿಸಿಕೊಂಡಿತ್ತು. ಹೀಗಾಗಿ, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಪದಾಧಿಕಾರಿಗಳ ನೇಮಕಕ್ಕೆ ವೀಕ್ಷಕರ ನೇಮಕ: ಡಿ.ಕೆ. ಶಿವಕುಮಾರ್

blank

ಕವಿತಾ 11ನೇ ವಯಸ್ಸಿಗೆ ಬಾಲ ಕಲಾವಿದೆಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ನಂತರ ಅವರು ತಮಿಳು ಹಾಗೂ ತೆಲುಗು ಚಿತ್ರಗಳಲ್ಲಿ ನಟಿಸಿದರು. 1977ರಲ್ಲಿ ತೆರೆಗೆ ಬಂದ ಸಹೋದರರ ಸವಾಲು ಸಿನಿಮಾ ಮೂಲಕ ಕವಿತಾ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ಇದಾದ ನಂತರ ಖಿಲಾಡಿ ಕಿಟ್ಟು ಸೇರಿ ಸಾಕಷ್ಟು ಚಿತ್ರಗಳಲ್ಲಿ ನಟಿಸಿದರು. 2009ರಲ್ಲಿ ತೆರೆಕಂಡ ಉಲ್ಲಾಸ ಉತ್ಸಾಹ ಅವರ ಕನ್ನಡದ ಕೊನೆಯ ಚಿತ್ರ. ಸದ್ಯ, ಕವಿತಾ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

blank

ಕೊವಿಡ್‍ನಿಂದ ಹಿಂದಿ, ಕನ್ನಡ, ತಮಿಳು, ತೆಲುಗು ಹಾಗೂ ಮಲಯಳಾಂ ಚಿತ್ರರಂಗದ ಸಾಕಷ್ಟು ಕಲಾವಿದರು, ನಿರ್ದೇಶಕರು ಹಾಗೂ ನಿರ್ಮಾಪಕರು ಕೊರೊನಾದಿಂದ ಮೃತಪಟ್ಟಿದ್ದಾರೆ.

The post ಹಿರಿಯ ನಟಿ ಕವಿತಾ ಅವರ ಪತಿ-ಪುತ್ರ ಇಬ್ಬರು ಸೋಂಕಿಗೆ ಬಲಿ appeared first on Public TV.

Source: publictv.in

Source link