ರಾಜ್ಯದಲ್ಲಿ 1.97% ಕೊರೊನಾ ಪಾಸಿಟಿವಿಟಿ ರೇಟ್: 12,763 ಮಂದಿ ಒಂದೇ ದಿನ ಡಿಸ್ಚಾರ್ಜ್

ರಾಜ್ಯದಲ್ಲಿ 1.97% ಕೊರೊನಾ ಪಾಸಿಟಿವಿಟಿ ರೇಟ್: 12,763 ಮಂದಿ ಒಂದೇ ದಿನ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 40,152 ಱಪಿಡ್ ಆ್ಯಂಟಿಜೆನ್ ಟೆಸ್ಟ್​ ಹಾಗೂ 1,30,960 ಆರ್​ಟಿಪಿಸಿಆರ್ ಟೆಸ್ಟ್​ಗಳೂ ಸೇರಿದಂತೆ ಒಟ್ಟು 1,71,112 ಕೊರೊನಾ ಟೆಸ್ಟ್​ಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು 3,382 ಮಂದಿಗೆ ಸೋಂಕು ಧೃಡಪಟ್ಟಿದೆ. ಈವರೆಗೆ ರಾಜ್ಯದಲ್ಲಿ ಸೋಂಕಿಗೊಳಗಾದವರ ಸಂಖ್ಯೆ 28,43,810 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 12,763 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಈವರೆಗೆ 27,32,242 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆದಂತಾಗಿದೆ. ಇಂದು 111 ಮಂದಿ ಸೋಂಕಿನಿಂದ ಗುಣಮುಖರಾಗದೇ ಸಾವನ್ನಪ್ಪಿದ್ದು ಈವರೆಗೆ ಒಟ್ಟು 35,040 ಮಂದಿ ಕೊರೊನಾಗೆ ಬಲಿಯಾದಂತಾಗಿದೆ. ಸದ್ಯ ರಾಜ್ಯದಲ್ಲಿ 76,505 ಆ್ಯಕ್ಟಿವ್ ಕೇಸ್​ಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿಅಂಶಗಳು ಹೇಳುತ್ತಿವೆ.

ಬೆಂಗಳೂರು ನಗರವೊಂದರಲ್ಲೇ ಇಂದು 813 ಮಂದಿ ಕೊರೊನಾ ಪಾಸಿಟಿವ್ ಆಗಿದ್ದು 11 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ 339, ಹಾಸನ 265, ಕೊಡಗು 209, ಮೈಸೂರು 367, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳಲ್ಲಿ ತಲಾ 150 ಮಂದಿ ಸೋಂಕಿಗೊಳಗಾಗಿದ್ದಾರೆ.

The post ರಾಜ್ಯದಲ್ಲಿ 1.97% ಕೊರೊನಾ ಪಾಸಿಟಿವಿಟಿ ರೇಟ್: 12,763 ಮಂದಿ ಒಂದೇ ದಿನ ಡಿಸ್ಚಾರ್ಜ್ appeared first on News First Kannada.

Source: newsfirstlive.com

Source link