ಮನ್​ಮುಲ್​ ಹಾಲಿಗೆ ನೀರು ಬೆರೆಸಿದ ಪ್ರಕರಣ; CID ಹೆಗಲಿಗೆ ತನಿಖೆಯ ಜವಾಬ್ದಾರಿ

ಮನ್​ಮುಲ್​ ಹಾಲಿಗೆ ನೀರು ಬೆರೆಸಿದ ಪ್ರಕರಣ; CID ಹೆಗಲಿಗೆ ತನಿಖೆಯ ಜವಾಬ್ದಾರಿ

ಮಂಡ್ಯ: ಮನ್​ಮುಲ್​​ನಲ್ಲಿ ಹಾಲಿಗೆ ನೀರು ಹಾಕಿದ ಪ್ರಕರಣದ ತನಿಖೆಯನ್ನ ರಾಜ್ಯ ಸರ್ಕಾರ CID ಹೆಗಲಿಗೆ ವಹಿಸಿ ಆದೇಶ ಹೊರಡಿಸಿದೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಿಐಡಿ ತನಿಖೆಗೆ ವಹಿಸುವುದಾಗಿ ಸಿಎಂ ಬಿಎಸ್​ ಯಡಿಯೂರಪ್ಪ ಹೇಳಿದ್ದರು. ಆದರೆ ಬದಲಾದ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಆದೇಶ ಹೊರಡಿಸಲು ಯಡಿಯೂರಪ್ಪ ಹಿಂದೇಟು ಹಾಕಿದ್ದರು.

ಇದಕ್ಕೆ ಆಕ್ರೋಶಗೊಂಡಿದ್ದ ಕಾಂಗ್ರೆಸ್​ ನಾಯಕ ಚಲುವರಾಯಸ್ವಾಮಿ ‘ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ ಕಾಲ್ ಮಾಡಿದ್ದಕ್ಕೆ ಸಿಐಡಿ ತನಿಖೆಗೆ ವಹಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಚಲುವರಾಯಸ್ವಾಮಿ ಅವರ ಈ ಆರೋಪ ಮಂಡ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಜೊತೆಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರ ಆಕ್ರೋಶಕ್ಕೂ ಇದು ಕಾರಣವಾಗಿತ್ತು.

ಈ ಎಲ್ಲಾ ಬೆಳವಣಿಗೆಗಳ‌ ನಂತರ ಕೊನೆಗೂ ರಾಜ್ಯ ಸರ್ಕಾರ ಪ್ರಕರಣವನ್ನ ತನಿಖೆಗೆ ಆದೇಶ ಹೊರಡಿಸಿದೆ. ಹಾಲು ಸರಬರಾಜು ಗುತ್ತಿಗೆದಾರರು, ಸಾಗಾಣಿಕೆದಾರರ ವಿರುದ್ಧ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐಪಿಸಿ ಸೆಕ್ಷನ್ 406, 420 ಅನ್ವಯ ಎಫ್‌ಐಆರ್ ದಾಖಲಾಗಿತ್ತು.

blank

The post ಮನ್​ಮುಲ್​ ಹಾಲಿಗೆ ನೀರು ಬೆರೆಸಿದ ಪ್ರಕರಣ; CID ಹೆಗಲಿಗೆ ತನಿಖೆಯ ಜವಾಬ್ದಾರಿ appeared first on News First Kannada.

Source: newsfirstlive.com

Source link