ನುಡಿದಂತೆ ನಡೆದ ದೀದಿ.. ವಿದ್ಯಾರ್ಥಿಗಳಿಗೆ 10 ಲಕ್ಷದ ಕ್ರೆಡಿಟ್ ಕಾರ್ಡ್ ಯೋಜನೆ ಜಾರಿ

ನುಡಿದಂತೆ ನಡೆದ ದೀದಿ.. ವಿದ್ಯಾರ್ಥಿಗಳಿಗೆ 10 ಲಕ್ಷದ ಕ್ರೆಡಿಟ್ ಕಾರ್ಡ್ ಯೋಜನೆ ಜಾರಿ

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ವಿದ್ಯಾರ್ಥಿಗಳಿಗೆ ಕ್ರೆಡಿಟ್ ಕಾರ್ಡ್ ಯೋಜನೆ ಜಾರಿಗೊಳಿಸಿದ್ದಾರೆ.

ಈ ಕುರಿತು ಇಂದು ಸುದ್ದಿಗೋಷ್ಠಿ ಕರೆದಿದ್ದ ಮಮತಾ ಬ್ಯಾನರ್ಜಿ.. ಬಂಗಾಳದ ಯುವಕರನ್ನ ಸ್ವಾವಲಂಬಿಗಳನ್ನಾಗಿ ಮಾಡಲು ಈ ಸ್ಕೀಮ್​ನ ಅಡಿಯಲ್ಲಿ 10 ಲಕ್ಷ ಸಾಲ ನೀಡಲಾಗುತ್ತಿದೆ. ವಾರ್ಷಿಕ ಬಡ್ಡಿದರವೂ ಕಡಿಮೆ ಇರಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರತಿ ವರ್ಷ 5 ಲಕ್ಷ ಉದ್ಯೋಗ ಸೃಷ್ಟಿ.. ವಿದ್ಯಾರ್ಥಿಗಳಿಗೆ 10 ಲಕ್ಷ ಮಿತಿಯ ಕ್ರೆಡಿಟ್ ಕಾರ್ಡ್- ದೀದಿ ಪ್ರಣಾಳಿಕೆ

ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತೃಣಮೂಲ ಕಾಂಗ್ರೆಸ್ ಹೊರಡಿಸಿದ್ದ ಪ್ರಣಾಳಿಕೆಯಲ್ಲಿ ಮಮತಾ ಬ್ಯಾನರ್ಜಿ ವಿದ್ಯಾರ್ಥಿಗಳಿಗೆ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಜಾರಿಗೆ ತರುವುದಾಗಿ ಹೇಳಿದ್ದರು. ಇದೀಗ ಯೋಜನೆ ಜಾರಿಗೊಳಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸುಲಭವಾಗಿ ಲೋನ್ ಪಡೆಲು ಅವಕಾಶ ಮಾಡಿಕೊಟ್ಟಿದ್ದಾರೆ. ಪ್ರಾಣಾಳಿಕೆ ಘೋಷಿಸಿದ್ದಾಗ ವಾರ್ಷಿಕ 4 ಪರ್ಸೆಂಟ್ ಬಡ್ಡಿದರದಲ್ಲಿ ಸಾಲ ಲಭ್ಯವಾಗಲಿದೆ ಎಂದು ಭರವಸೆ ನೀಡಿದ್ದರು.

The post ನುಡಿದಂತೆ ನಡೆದ ದೀದಿ.. ವಿದ್ಯಾರ್ಥಿಗಳಿಗೆ 10 ಲಕ್ಷದ ಕ್ರೆಡಿಟ್ ಕಾರ್ಡ್ ಯೋಜನೆ ಜಾರಿ appeared first on News First Kannada.

Source: newsfirstlive.com

Source link