ಇಂದು ರಾಷ್ಟ್ರೀಯ ವೈದ್ಯರ ದಿನಾಚರಣೆ, ವೈದ್ಯರನ್ನುದ್ದೇಶಿಸಿ ಪ್ರಧಾನಿ ಭಾಷಣ

ಇಂದು ರಾಷ್ಟ್ರೀಯ ವೈದ್ಯರ ದಿನಾಚರಣೆ, ವೈದ್ಯರನ್ನುದ್ದೇಶಿಸಿ ಪ್ರಧಾನಿ ಭಾಷಣ

ನವದೆಹಲಿ: ಇವತ್ತು ರಾಷ್ಟ್ರೀಯ ವೈದ್ಯರ ದಿನ. ಇದರ ನಿಮಿತ್ತ ಪ್ರಧಾನಿ ಮೋದಿ, ಕಳೆದ ಸುಮಾರು ಒಂದೂವರೆ ವರ್ಷದಿಂದ ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ಹಗಲಿರುಳು ದುಡಿದು ಸೇವೆ ಸಲ್ಲಿಸುತ್ತಿರೋ ವೈದ್ಯರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಭಾರತೀಯ ವೈದ್ಯಕೀಯ ಸಂಘ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಸ್ವತಃ ತಮ್ಮ ಟ್ವಿಟರ್​​ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ಮಧ್ಯಾಹ್ನ 3 ಗಂಟೆಗೆ ವೈದ್ಯ ಸಮುದಾಯವನ್ನ ಉದ್ದೇಶಿಸಿ ಮಾತನಾಡುವುದಾಗಿ ಅವರು ತಿಳಿಸಿದ್ದಾರೆ.

The post ಇಂದು ರಾಷ್ಟ್ರೀಯ ವೈದ್ಯರ ದಿನಾಚರಣೆ, ವೈದ್ಯರನ್ನುದ್ದೇಶಿಸಿ ಪ್ರಧಾನಿ ಭಾಷಣ appeared first on News First Kannada.

Source: newsfirstlive.com

Source link