ಕೆಐಎಡಿಬಿ ಕಚೇರಿ ಮೇಲೆ ಎಸಿಬಿ ದಾಳಿ – 70 ಸಾವಿರ ನಗದು, ದಾಖಲೆ ಜಪ್ತಿ

ಹುಬ್ಬಳ್ಳಿ: ಕೆಐಎಡಿಬಿ ಕಚೇರಿ ಹಾಗೂ ವಿಶೇಷ ಭೂಸ್ವಾಧೀನಾಧಿಕಾರಿಗಳ ಕಚೇರಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಹುಬ್ಬಳ್ಳಿಯ ರಾಯಾಪುರ ಬಳಿಯ ಕೆಐಎಡಿಬಿ ಕಚೇರಿ ಮೇಲೆ ದಾಳಿ ನಡೆಸಿ 70 ಸಾವಿರ ನಗದು ಸೇರಿದಂತೆ ಮಹತ್ವದ ದಾಖಲೆಗಳನ್ನ ಜಪ್ತಿ ಮಾಡಿದ್ದಾರೆ.

ಕೆಐಎಡಿಬಿ ಕಚೇರಿಯಲ್ಲಿ ದೊಡ್ಡಮಟ್ಟದ ಅವ್ಯವಹಾರ ಹಾಗೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವಾದಿರಾಜ ಮನ್ನಾರಿ ಹಾಗೂ ಶಿವಾಜಿ ಎನ್ನುವವರು ಪ್ರತ್ಯೇಕ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸಿಬಿ ಎಸ್‍ಪಿ ಎಸ್ ನ್ಯಾಮೇಗೌಡ ನೇತೃತ್ವದ ತಂಡ ಕೆಐಎಡಿಬಿ ಕಚೇರಿ ಮೇಲೆ ದಾಳಿ ನಡೆಸಿ ನಗದು ಸೇರಿದಂತೆ ದಾಖಲಾತಿಗಳನ್ನ ವಶಪಡಿಸಿಕೊಂಡಿದ್ದಾರೆ.

ಕಳೆದ ಎರಡು ದಿನಗಳಿಂದ ಸತತವಾಗಿ ಕೆಐಎಡಿಬಿ ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಸಿದ ಎಸಿಬಿ ಅಧಿಕಾರಿಗಳು, ನೈಜ ಫಲಾನುಭವಿಗಳಿಗೆ ಪರಿಹಾರ ನೀಡದೇ, ವ್ಯಾಜ್ಯಗಳು ನ್ಯಾಯಾಲಯದಲ್ಲಿರುವ ಪರಿಹಾರ ವಿತರಣೆ ಮಾಡಿರುವ ದಾಖಲೆಗಳನ್ನ ವಶಪಡಿಸಿಕೊಂಡಿದ್ದಾರೆ.

blank

ನವಲೂರು ಸಮೀಪದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮತ್ತು ವಿಶೇಶ ಭೂಸ್ವಾಧೀನಾಧಿಕಾರಿಗಳ ಕಚೇರಿಯಿಂದ ದಾಖಲೆ ಹಾಗೂ ನಗದು ವಶಪಡಿಸಿಕೊಂಡಿರುವ ಎಸಿಬಿ ಅಧಿಕಾರಿಗಳು ಕೆಐಎಡಿಬಿ ಸಿಬ್ಬಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿ ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ರಕ್ಷಣೆಗಾಗಿ ಪೊಲೀಸ್ ಠಾಣೆಗೆ ಓಡಿದ ಆಸ್ಪತ್ರೆ ವೈದ್ಯ, ಸಿಬ್ಬಂದಿ

The post ಕೆಐಎಡಿಬಿ ಕಚೇರಿ ಮೇಲೆ ಎಸಿಬಿ ದಾಳಿ – 70 ಸಾವಿರ ನಗದು, ದಾಖಲೆ ಜಪ್ತಿ appeared first on Public TV.

Source: publictv.in

Source link