ಸೋಂಕಿತರ ಚಿಕಿತ್ಸೆಗೆ ದಾನಿಗಳಿಂದ ಜಿಲ್ಲಾಡಳಿತಕ್ಕೆ ಆಕ್ಸಿಜನ್ ಕಾನ್ಸಂಟ್ರೇಟರ್‌ಗಳ ಕೊಡುಗೆ

ವಿಜಯಪುರ: ಜಿಲ್ಲೆಯಲ್ಲಿ ಕಳೆದ ಏಪ್ರಿಲ್, ಮೇ ಹಾಗೂ ಜೂನ್ ತಿಂಗಳಲ್ಲಿ ಕೋವಿಡ್-19 ಎರಡನೇ ಅಲೆಯ ಹಿನ್ನೆಲೆಯಲ್ಲಿ ಜಿಲ್ಲೆಗೆ ಕೆಲವು ವಿವಿಧ ಸಂಘ, ಸಂಸ್ಥೆಗಳು, ದಾನಿಗಳು ಸ್ವಯಂಪ್ರೇರಿತರಾಗಿ ಆಕ್ಸಿಜನ್ ಕಾನ್ಸಂಟ್ರೇಟರ್‍ಗಳನ್ನು ಕೋವಿಡ್-19 ಸೋಂಕಿತರ ಚಿಕಿತ್ಸೆಗಾಗಿ ನೀಡುತ್ತಿದ್ದು, ಅವುಗಳನ್ನು ಸಂಬಂಧಿಸಿದ ಸರ್ಕಾರಿ ಆಸ್ಪತ್ರೆಗಳಿಗೆ ಹಸ್ತಾಂತರಿಸಿ ಕ್ರಮಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.

ಅದರಂತೆ ಇಂದು ಬೆಂಗಳೂರನ ಸಂಭವ ಫೌಂಡೇಶನ್ ಇವರು ಈ ಕೆಳಕಂಡ ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ರೋಗಿಗಳ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಬಳಸಿಕೊಳ್ಳಲು ಜಿಲ್ಲಾಡಳಿತಕ್ಕೆ ನೀಡಿದ್ದು, ಅವುಗಳನ್ನು ಆದ್ಯತೆ ಮೇಲೆ ಸಂಬಂಧಿಸಿದ ಆಸ್ಪತ್ರೆಗಳಿಗೆ ಹಸ್ತಾಂತರಕ್ಕೆ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಈ ಆಕ್ಸಿಜನ್ ಕಾನ್ಸಂಟ್ರೇಟರ್ (10 ಎಲ್‍ಪಿಎಮ್ ಕೆಪ್ಯಾಸಿಟಿ)ಗಳ-10 ನೀಡಿದ್ದು, ಜಿಲ್ಲಾಡಳಿತ ಪರವಾಗಿ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್, ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಅವರ ಉಪಸ್ಥಿತಿಯಲ್ಲಿ ಸ್ವೀಕರಿಸಿದ್ದು,
ಜಿಲ್ಲಾಸ್ಪತ್ರೆಗೆ ಹಸ್ತಾಂತರಿಸಲಾಗಿದೆ.

ಮುಂದಿನ ದಿನಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಜಿಲ್ಲಾ ಆಸ್ಪತ್ರೆ ತಾಲೂಕು ಆಸ್ಪತ್ರೆಗಳಿಗೆ ಹಂಚಿಕೆ ಮಾಡಲಾಗುತ್ತದೆ. ಅದರಂತೆ ಸಂಭವ ಫೌಂಡೇಶನ್, ಬೆಂಗಳೂರು ಇವರು ಮುಂದಿನ ದಿನಗಳಲ್ಲಿ ಈ ಕೆಳಕಂಡ ವೈದ್ಯಕೀಯ ಉಪಕರಣಗಳನ್ನೂ ಜಿಲ್ಲೆಗೆ ನೀಡಲಾಗುವುದೆಂದು ತಿಳಿಸಿದ್ದಾರೆ ಎಂದರು. ಈ ಸಂದರ್ಭದಲ್ಲಿ ಉಪವಿಭಾಗಾ ಧಿಕಾರಿ ರಾಹುಲ್ ಸಿಂಧೆ, ಸಮಾಜದ ಮುಖಂಡರಾದ ಅಡಿವೆಪ್ಪ ಸಾಲಗಲ್ ಹಾಗೂ ಇತರರು ಉಪಸ್ಥಿತರಿದ್ದರು.

The post ಸೋಂಕಿತರ ಚಿಕಿತ್ಸೆಗೆ ದಾನಿಗಳಿಂದ ಜಿಲ್ಲಾಡಳಿತಕ್ಕೆ ಆಕ್ಸಿಜನ್ ಕಾನ್ಸಂಟ್ರೇಟರ್‌ಗಳ ಕೊಡುಗೆ appeared first on Public TV.

Source: publictv.in

Source link