ರಾಮುಲು PA ಬಂಧನ: ವಂಚಿಸುವವರಿಂದ ಬಗ್ಗೆ ಎಚ್ಚರದಿಂದಿರಬೇಕೆಂದ ಬಿ. ವೈ. ವಿಜಯೇಂದ್ರ

ರಾಮುಲು PA ಬಂಧನ: ವಂಚಿಸುವವರಿಂದ ಬಗ್ಗೆ ಎಚ್ಚರದಿಂದಿರಬೇಕೆಂದ ಬಿ. ವೈ. ವಿಜಯೇಂದ್ರ

ಬೆಂಗಳೂರು: ಸಿಸಿಬಿಯಿಂದ ಶ್ರೀರಾಮುಲು ಪಿಎ ರಾಜಣ್ಣ ಬಂಧನಕ್ಕೆ ಸಂಬಂಧಿಸಿದಂತೆ ಬಿ.ವೈ. ವಿಜಯೇಂದ್ರ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು ವಿರೋಧಿಗಳಿಗೆ ಅಪಪ್ರಚಾರದ ಸರಕಾಗಿಯೂ ಬಳಕೆಯಾಗುತ್ತಿದೆ.

ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೋಲಿಸರು ಕ್ರಮ ತೆಗೆದುಕೊಂಡಿದ್ದಾರೆ. ನನ್ನನೂ ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದಿರಬೇಕೆಂದು ವಿನಂತಿಸುವೆ ಎಂದಿದ್ದಾರೆ.

The post ರಾಮುಲು PA ಬಂಧನ: ವಂಚಿಸುವವರಿಂದ ಬಗ್ಗೆ ಎಚ್ಚರದಿಂದಿರಬೇಕೆಂದ ಬಿ. ವೈ. ವಿಜಯೇಂದ್ರ appeared first on News First Kannada.

Source: newsfirstlive.com

Source link