ಡಿಆರ್​​ಡಿಒ ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ (61) ನಿಧನ

ಡಿಆರ್​​ಡಿಒ ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ (61) ನಿಧನ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಡಿಆರ್​ಡಿಒ ಮಾಜಿ ವಿಜ್ಞಾನಿ, ಖ್ಯಾತ ವಿಜ್ಞಾನ ಬರಹಗಾರರಾಗಿದ್ದ ಸುಧೀಂದ್ರ ಹಾಲ್ದೊಡ್ಡೇರಿ ಇಂದು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

61 ವರ್ಷದ ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ಕಳೆದ 9 ದಿನಗಳ ಹಿಂದೆ ಹೃದಯಾಘಾತವಾಗಿತ್ತು. ಅವರನ್ನ ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಇಂದು ಅವರ ಮೆದುಳು ನಿಷ್ಕ್ರಿಯಗೊಂಡು, ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಡಿಫೆನ್ಸ್ ರಿಸರ್ಚ್​ ಅಂಡ್​ ಡೆವಲಪ್​ಮೆಂಟ್ ಆರ್ಗನೈಜೇಷನ್ (DRDO)ದಲ್ಲಿ ವಿಜ್ಞಾನಿ ಆಗಿ ಸೇವೆ ಸಲ್ಲಿಸಿದ್ದ, ಹೆಚ್​​​ಎಎಲ್​​ ಹಿರಿಯ ಎಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ಏರೋಸ್ಪೇಸ್​​ನಲ್ಲಿ 26 ವರ್ಷಗಳ ಸಂಶೋಧನೆ ಸಲ್ಲಿಸಿದ್ದರು. ವಿಜ್ಞಾನ ಬರಹಗಾರರಾದ ಮೂಲಕವೂ ಸಾಕಷ್ಟು ಖ್ಯಾತಿಯನ್ನು ಪಡೆದುಕೊಂಡಿದ್ದರು. ಸುಧೀಂದ್ರ ಹಾಲ್ದೊಡ್ಢೇರಿ ಅವರ ಮೃತದೇಹವನ್ನು ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

The post ಡಿಆರ್​​ಡಿಒ ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ (61) ನಿಧನ appeared first on News First Kannada.

Source: newsfirstlive.com

Source link