ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಸರ್ಕಾರ ಕಾರಣವಲ್ಲ -ನಿರ್ಮಲಾ ಸೀತಾರಾಮನ್

ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಸರ್ಕಾರ ಕಾರಣವಲ್ಲ -ನಿರ್ಮಲಾ ಸೀತಾರಾಮನ್

ಬೆಂಗಳೂರು: ಜನ ಸಾಮಾನ್ಯರ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಸರ್ಕಾರ ಕಾರಣವಲ್ಲ, ರಾಷ್ಟ್ರದ ಬಡ ಜನರಿಗೆ ನಮ್ಮ ಸರ್ಕಾರ ಸಹಾಯ ಹಸ್ತ ಚಾಚಿದೆ ಅಂತಾ ಬೆಂಗಳೂರಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಸೀತಾರಾಮನ್.. ಲಾಕ್ ಡೌನ್ ಸಂದರ್ಭದಲ್ಲೂ ಉಚಿತ ಆಹಾರ ಪದಾರ್ಥಗಳನ್ನು ವಿತರಿಸಲಾಗಿತ್ತು. ಮೂರು ಮೂರು ಎಲ್​​ಪಿಜಿ ಸಿಲಿಂಡರ್​ಗಳನ್ನ ವಿತರಣೆ ಮಾಡಿದ್ದೇವು. ಆದರೂ ಬೆಲೆ ಏರಿಕೆಯ ಬಿಸಿ ರಾಷ್ಟ್ರದ ಜನರಿಗೆ ತಟ್ಟಬಾರದು ಎಂದು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಅಂತಾ ತಿಳಿಸಿದರು.

ಅದಕ್ಕೆ ಅಗತ್ಯ ಕ್ರಮಗಳನ್ನೂ ಕೈಗೊಳ್ಳುತ್ತಿದೆ‌. ಕೆಲವೊಂದು ಸಂಗತಿಗಳು ನಮ್ಮ ಕೈಮೀರಿ ಹೋಗುತ್ತಿವೆ. ಆದರೂ ಅತ್ಯಗತ್ಯ ಆಹಾರ ಪದಾರ್ಥಗಳ ರಫ್ತಿಗೆ ಕಡಿವಾಣ ಹಾಕಲಾಗಿದೆ. ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಯಾವುದೇ ಪೂರೈಕೆ ಕೊರತೆ ಮಾಡುತ್ತಿಲ್ಲ. ರಾಜ್ಯ ಸರ್ಕಾರಗಳ ಬೇಡಿಕೆಗೆ ಅನುಗುಣವಾಗಿ ಪೂರೈಕೆ ಮಾಡಲಾಗುತ್ತದೆ‌. ಆದರೆ ಲಸಿಕೆ ಸಂಗ್ರಹ ಮುಗಿಯುವ ಮೊದಲು, ಏಳು ದಿನಗಳು ಮುಂಚಿತವಾಗಿ ರಾಜ್ಯ ಸರ್ಕಾರಗಳು ಬೇಡಿಕೆ ಸಲ್ಲಿಸಬೇಕಾಗುತ್ತದೆ ಎಂದರು.

ಸಿದ್ದರಾಮಯ್ಯ ತಪ್ಪು ಮಾಹಿತಿ ನೀಡಬಾರದು
ಯಾವುದೇ ರಾಜ್ಯಗಳಿಗೆ 2020-21ನೇ ಸಾಲಿನಲ್ಲಿ ಜಿಎಸ್ ಟಿ ಬಾಕಿ ವಿತರಣೆ ಮಾಡುವುದಿಲ್ಲ. ಈಗಾಗಲೇ ಒಪ್ಪಂದ ಮಾಡಿಕೊಂಡಿರುವ ಪ್ರಕಾರ ಸಾಲಗಳನ್ನು ಪಡೆದು ಜಿಎಸ್ಟಿ ಕೊರತೆ ತುಂಬಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ಕರ್ನಾಟಕಕ್ಕೆ 14ನೇ ಹಣಕಾಸು ಆಯೋಗದಿಂದ ಬರಬೇಕಾಗಿದ್ದ 5000ಕೋಟಿಗೆ ನಾನು ಅಡ್ಡಿ ಮಾಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿರುವುದು ಸರಿಯಲ್ಲ ಎಂದರು.

ಅವರ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ನಡೆದ ಹಣಕಾಸು ಅಕ್ರಮಗಳ ಬಗ್ಗೆಯೂ ಅವರು ಸ್ವಲ್ಪ ಮಾತನಾಡಲಿ‌. ಕರ್ನಾಟಕಕ್ಕೆ ತೊಂದರೆ ಮಾಡಬೇಕೆಂದು ನಮ್ಮ ಉದ್ದೇಶವಿರಲಿಲ್ಲ. ರಾಜ್ಯ ಸರ್ಕಾರ ಆದಾಯ ಕೊರತೆ ಪ್ರಮಾಣವನ್ನು ನಿಗದಿ ಪಡಿಸಿದ್ದಕ್ಕಿಂತ ಹೆಚ್ಚು ತೋರಿಸಿದ್ದರಿಂದ ಕರ್ನಾಟಕ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳಿಗೆ ಹೆಚ್ಚುವರಿ ಹಣಕಾಸು ಬಿಡುಗಡೆ ತಡೆಹಿಡಿಯಲಾಯ್ತು. ಸಿದ್ದರಾಮಯ್ಯನವರು ತಪ್ಪು ಮಾಹಿತಿ ಕೊಡಬಾರದು ಎಂದರು.

The post ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಸರ್ಕಾರ ಕಾರಣವಲ್ಲ -ನಿರ್ಮಲಾ ಸೀತಾರಾಮನ್ appeared first on News First Kannada.

Source: newsfirstlive.com

Source link