ರೇಖಾ ಹತ್ಯೆಯ ಮಾಸ್ಟರ್ ಮೈಂಡ್ ಆರೋಪಿ ಮಾಲಾಗೆ 14 ದಿನ ನ್ಯಾಯಾಂಗ ಬಂಧನ

ರೇಖಾ ಹತ್ಯೆಯ ಮಾಸ್ಟರ್ ಮೈಂಡ್ ಆರೋಪಿ ಮಾಲಾಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಲಾ ಮತ್ತು ಮಾಲಾಳ ಪುತ್ರ ಅರುಳ್​​ನನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪೊಲೀಸ್​ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನ ಮ್ಯಾಜಿಸ್ಟ್ರೇಟ್ ಕೋರ್ಟ್​​ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್​ ಇಬ್ಬರು ಆರೋಪಿಗಳನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಜೂನ್ 24 ರಂದು ನಗರದ ಛಲವಾದಿಪಾಳ್ಯದ ಫ್ಲವರ್ ಗಾರ್ಡನ್​​ನಲ್ಲಿ ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ನಡೆದಿತ್ತು. ರೇಖಾ ಕದಿರೇಶ್​​ ಅವರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

The post ರೇಖಾ ಹತ್ಯೆಯ ಮಾಸ್ಟರ್ ಮೈಂಡ್ ಆರೋಪಿ ಮಾಲಾಗೆ 14 ದಿನ ನ್ಯಾಯಾಂಗ ಬಂಧನ appeared first on News First Kannada.

Source: newsfirstlive.com

Source link