ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಅಭಯಚಂದ್ರ ಜೈನ್

– ರಾಜಕೀಯ ನಿವೃತ್ತಿ ಘೋಷಿಸಿದ್ರಾ ಮಾಜಿ ಸಚಿವ..?

ಮಂಗಳೂರು: ಕಾಂಗ್ರೇಸ್ ಪಕ್ಷದಲ್ಲಿ ಹಿರಿಯರೇ ಇರೋದು. ಹೀಗಾಗಿ ಮುಂದಿನ ದಿನದಲ್ಲಿ ಯುವಕರಿಗೆ ಆದ್ಯತೆ ನೀಡಬೇಕು ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಘೋಷಿಸಿದ್ದಾರೆ.

ಇಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ಬದಲಾವಣೆ ಅಗತ್ಯ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಯುವಕರಿಗೆ ಅವಕಾಶ ಒದಗಿಸಬೇಕು. ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಾನು ಯುವಕರಿಗೆ ಸ್ಥಾನವನ್ನು ನೀಡಬೇಕೆಂದು ಆಗ್ರಹಿಸಿದ್ದೆ. ಆದರೂ ನಾನು ಸ್ಪರ್ಧಿಸಬೇಕಾಯಿತು. ಕೊನೆಗೆ ಸೋಲಬೇಕಾಯಿತು ಎಂದರು. ಇದನ್ನೂ ಓದಿ: ಸಿಎಂ ಪುತ್ರನ ಹೆಸರಲ್ಲಿ ರಾಮುಲು PA ಡೀಲ್..? – 3 ಆಡಿಯೋದಲ್ಲಿ 5 ಕೋಟಿಗೆ ಡಿಮ್ಯಾಂಡ್

ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಯುವಕರಿಗೆ ಸ್ಥಾನ ನೀಡುವುದು ಇಂದಿನ ರಾಜಕೀಯದ ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ನಾನು ಈಗಾಗಲೇ ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಸ್ವಯಂ ಆಗಿ ನಿರ್ಧರಿಸಿ, ಯುವಕರಿಗೆ ಸ್ಥಾನ ನೀಡಿ ಗೆಲ್ಲಿಸಲು ನಾನು ನಿರ್ಧರಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.

The post ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಅಭಯಚಂದ್ರ ಜೈನ್ appeared first on Public TV.

Source: publictv.in

Source link