ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರ ದುರ್ಮರಣ

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರ ದುರ್ಮರಣ

ಕೊಪ್ಪಳ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕವಿತಾ(10) ಹಾಗೂ ಸಂಜನಾ (9) ಮೃತ ಬಾಲಕಿಯರು.

ಕೂಲಿ ಕೆಲಸಕ್ಕೆಂದು ಬಂದಿದ್ದಾಗ ಬಾಲಕಿಯರು ಕೃಷಿ ಹೊಂಡದಲ್ಲಿ ಸ್ನಾನ ಮಾಡಲು ಹೋಗಿದ್ದರು. ಈ ವೇಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮಕ್ಕಳನ್ನು ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ.

blankಘಟನೆ ಸಂಬಂಧ ಕನಕಗಿರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

The post ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರ ದುರ್ಮರಣ appeared first on News First Kannada.

Source: newsfirstlive.com

Source link