ಬೆಸ್ಕಾಂ ಸಬ್ ಸ್ಟೇಷನ್​​ನಲ್ಲಿ ಆಕಸ್ಮಿಕ ಬೆಂಕಿ- ಟ್ರಾನ್ಸ್​ಫಾರ್ಮರ್​ ಸೇರಿ ಎಲೆಕ್ಟ್ರಿಕ್ ಉಪಕರಣಗಳು ಬೆಂಕಿಗಾಹುತಿ

ಕೋಲಾರ: ಬೆಸ್ಕಾಂ ಸಬ್ ಸ್ಟೇಷನ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಟ್ರಾನ್ಸ್ ಫಾರ್ಮರ್ ಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಭಾರೀ ಪ್ರಮಾಣದ ಹೊಗೆ ಎದ್ದಿದೆ. ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ಬೆಂಸ್ಕಾಂ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ನಗರದ ಮಹಾಲಕ್ಷ್ಮಿ ಬಡಾವಣೆ ಬಳಿ ಇರುವ ಸಬ್ ಸ್ಟೇಷನ್‍ನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಆಕಾಶದ ಎತ್ತರಕ್ಕೆ ದಟ್ಟವಾದ ಹೊಗೆ ಆವರಿಸಿದೆ. ಟ್ರಾನ್ಸ್ ಫಾರ್ಮರ್ ಸೇರಿದಂತೆ ಎಲೆಕ್ಟ್ರಿಕ್ ಉಪಕರಣಗಳು ಬೆಂಕಿಗಾಹುತಿಯಾಗಿವೆ. ಕೋಟ್ಯಂತರ ರೂ. ನಷ್ಟ ಸಂಭವಿಸಿರಬಹುದೆಂದು ಬೆಸ್ಕಾಂ ಸಿಬ್ಬಂದಿ ತಿಳಿಸಿದ್ದಾರೆ. ಅಕ್ಕ ಪಕ್ಕದ ಏರಿಯಾಗಳಿಗೂ ದಟ್ಟ ಹೊಗೆ ಆವರಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವುದರಲ್ಲಿ ನಿರತರಾಗಿದ್ದಾರೆ.

ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ. ಭಾರೀ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಭಾರೀ ಪ್ರಮಾಣದಲ್ಲಿ ಹೊಗೆ ಆವರಿಸಿದೆ.

The post ಬೆಸ್ಕಾಂ ಸಬ್ ಸ್ಟೇಷನ್​​ನಲ್ಲಿ ಆಕಸ್ಮಿಕ ಬೆಂಕಿ- ಟ್ರಾನ್ಸ್​ಫಾರ್ಮರ್​ ಸೇರಿ ಎಲೆಕ್ಟ್ರಿಕ್ ಉಪಕರಣಗಳು ಬೆಂಕಿಗಾಹುತಿ appeared first on Public TV.

Source: publictv.in

Source link