ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವು

ಕೊಪ್ಪಳ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ದುರಂತ ಅಂತ್ಯ ಕಂಡಿರುವ ಘಟನೆ ಜಿಲ್ಲೆಯ ಕನಕಗಿರಿ ತಾಲೂಕಿನ ವರನಖೇಡ ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದ್ದು, ತಡವಾಗಿ ತಡವಾಗಿ ಬೆಳಕಿಗೆ ಬಂದಿದೆ.

ಹುಲಿಹೈದರ್ ಗ್ರಾಮದ ಕವಿತಾ (11) ಹಾಗೂ ಆಗೋಲಿ ಗ್ರಾಮದ ಸಂಜನಾ (9) ಸಾವನ್ನಪ್ಪಿರುವ ಬಾಲಕಿಯರು. ವರನಖೇಡ ಗ್ರಾಮದ ತೋಟದ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ.

ಪಾಲಕರು ತೋಟದಲ್ಲಿ ವಾಸವಿದ್ದ ಹಿನ್ನಲೆಯಲ್ಲಿ ನಿನ್ನೆ ಪಾಲಕರ ಹತ್ತಿರ ಬಂದಿದ್ದ ಈ ಬಾಲಕಿಯರು, ಆಟ ಆಡುತ್ತ ಕೃಷಿ ಹೊಂಡಕ್ಕೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಬಾಲಕಿಯರ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

The post ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವು appeared first on Public TV.

Source: publictv.in

Source link