ಬಾರ್, ಮಾಲ್​​, ದೇವಸ್ಥಾನಗಳಿಗೆ ರಿಲೀಫ್​.. ಇನ್ಮುಂದೆ ನೈಟ್​ ಕರ್ಫ್ಯೂ ಇರಲ್ಲ-ಸಿಎಂ ಘೋಷಣೆ

ಬಾರ್, ಮಾಲ್​​, ದೇವಸ್ಥಾನಗಳಿಗೆ ರಿಲೀಫ್​.. ಇನ್ಮುಂದೆ ನೈಟ್​ ಕರ್ಫ್ಯೂ ಇರಲ್ಲ-ಸಿಎಂ ಘೋಷಣೆ

ಬೆಂಗಳೂರು: ಅನ್​ಲಾಕ್ ಸಂಬಂಧ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಬಿ.ಎಸ್​. ಯಡಿಯೂರಪ್ಪ.. ಬಾರ್, ಮಾಲ್​ಗಳು, ದೇವಸ್ಥಾನಗಳನ್ನು ತೆರೆಯಲು ಜುಲೈ 5 ನೇ ತಾರೀಖಿನಿಂದ ಜು. 19 ನೇ ತಾರೀಕಿನವರೆಗೆ ಅವಕಾಶ ನೀಡಲಾಗಿದೆ. ಥಿಯೇಟರ್​ಗಳನ್ನು ಸದ್ಯಕ್ಕೆ ತೆರೆಯಲಾಗುವುದಿಲ್ಲ ಎಂದರು.

ಸಿಎಂ ಸುದ್ದಿಗೋಷ್ಠಿಯ ಮುಖ್ಯಾಂಶಗಳು..

1. ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

2. ಮಾಲ್​ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

3. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.

4. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.

5. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.

6. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

7. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

8. ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.

9. ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

10. ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.

11. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.

12. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.

13. ಪಬ್​ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್​ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

14. ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.

The post ಬಾರ್, ಮಾಲ್​​, ದೇವಸ್ಥಾನಗಳಿಗೆ ರಿಲೀಫ್​.. ಇನ್ಮುಂದೆ ನೈಟ್​ ಕರ್ಫ್ಯೂ ಇರಲ್ಲ-ಸಿಎಂ ಘೋಷಣೆ appeared first on News First Kannada.

Source: newsfirstlive.com

Source link