ನವದೆಹಲಿ: ದೇಶದಲ್ಲಿ ಎಲ್ಲಾ ಕಡೆಗಳಲ್ಲೂ ಕೋವಿಡ್ ಸೋಂಕಿತರ ಪ್ರಮಾಣ ಒಂದೇ ತೆರನಾಗಿಲ್ಲ. ಶೇಕಡಾ 80ರಷ್ಟು ಕೋವಿಡ್ ಪ್ರಕರಣಗಳು ಕೇವಲ 90 ಜಿಲ್ಲೆಗಳಲ್ಲಿ ಕಂಡುಬಂದಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್, ನಾವು ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಎಲ್ಲಾದರೂ ಒಂದೆಡೆ ಕೋವಿಡ್ ಪ್ರಕರಣಗಳು ದಾಖಲಾದರೆ, ಎಲ್ಲಾ ರಾಜ್ಯಗಳು ಕಟ್ಟುನಿಟ್ಟಾದ ನಿರ್ಬಂಧಗಳನ್ನು ಜಾರಿಗೆ ತರಲೇಬೇಕು ಎಂದು ಹೇಳಿದ್ದಾರೆ.

ಸಾಂಕ್ರಾಮಿಕ ರೋಗದ ಎರಡನೇ ಅಲೆ ಇನ್ನೂ ಮುಗಿದಿಲ್ಲ. ಹೀಗಾಗಿ ಎಲ್ಲ ರಾಜ್ಯಗಳು ಎಚ್ಚರದಿಂದ ಇರಬೇಕು ಎಂದು ಅವರು ಮನವಿ ಮಾಡಿದ್ದಾರೆ.

The post ಕೊರೊನಾ 2ನೇ ಅಲೆ ಇನ್ನೂ ಮುಗಿದಿಲ್ಲ, ಎಚ್ಚರಿಕೆಯಿಂದಿರಿ -ಕೇಂದ್ರ ಆರೋಗ್ಯ ಸಚಿವಾಲಯ appeared first on News First Kannada.

Source: newsfirstlive.com

Source link