ದಿಲೀಪ್ ಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ

ದಿಲೀಪ್ ಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ

ನವದೆಹಲಿ: ಬಾಲಿವುಡ್​ ಹಿರಿಯ ನಟ ದಿಲೀಪ್ ಕುಮಾರ್ ಇಂದು ಬೆಳಗ್ಗೆ ಮುಂಬೈನ ಹಿಂದೂಜಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದಿದ್ದಾರೆ. ದಿಗ್ಗಜ ನಟನ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ದಿಲೀಪ್ ಕುಮಾರ್ ಅವರ ನಿಧನದಿಂದ ಸಾಂಸ್ಕೃತಿಕ ರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದಾರೆ. ದಿಲೀಪ್ ಕುಮಾರ್ ಅವರು ಸಿನಿಮಾ ಲೆಜೆಂಡ್ ​​ಆಗಿ ನೆನಪಿನಲ್ಲಿರುತ್ತಾರೆ. ಅವರು ಅಪ್ರತಿಮ ಪ್ರತಿಭಾವಂತರಾಗಿದ್ದರು. ತಮ್ಮ ನಟನೆಯಿಂದ ಎಷ್ಟೋ ತಲೆಮಾರುಗಳನ್ನು ಮಂತ್ರ ಮುಗ್ಧರನ್ನಾಗಿಸಿದ್ದರು. ಅವರ ಕುಟುಂಬ, ಸ್ನೇಹಿತರು, ಅಭಿಮಾನಿಗಳಿಗೆ ನನ್ನ ಸಂತಾಪ ಎಂದು ಮೋದಿ ಟ್ವೀಟ್​ ಮಾಡಿದ್ದಾರೆ.

ದಿಲೀಪ್ ಕುಮಾರ್ ಅವರ ನಿಧನಕ್ಕೆ ರಾಜಸ್ಥಾನ ಸಿಎಂ ಅಶೋಕ್ ಗೆಹಲೋಟ್​, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಶಶಿ ತರೂರ್​, ರಾಹುಲ್ ಗಾಂಧಿ ಸೇರಿದಂತೆ ಹಲವರು ಸಂತಾಪ ಸೂಚಿಸಿ ಟ್ವೀಟ್​ ಮಾಡಿದ್ದಾರೆ.

The post ದಿಲೀಪ್ ಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ appeared first on News First Kannada.

Source: newsfirstlive.com

Source link