ಜು.12 ರಂದು ಯಾರೂ ಮನೆಯ ಬಳಿ ಬರಬೇಡಿ: ಶಿವಣ್ಣ ಮನವಿ

ಬೆಂಗಳೂರು: ಈ ಬಾರಿ ನನ್ನ ಹುಟ್ಟುಹಬ್ಬ ಆಚರಣೆ ಮಾಡಲ್ಲ. ಹೀಗಾಗಿ ಯಾರೂ ಕೂಡ ಮನೆ ಬಳಿ ಬರಬೇಡಿ ಎಂದು ಸ್ಯಾಂಡಲ್‍ವುಡ್ ಹ್ಯಾಟ್ರಿಕ್ ಹೀರೋ, ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಮನವಿ ಮಾಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ಮಾಡಿರುವ ಶಿವಣ್ಣ ತಮ್ಮ ಅಭಿಮಾನಿಗಳಲ್ಲಿ ಕೋರಿಕೆಯೊಂದನ್ನು ಮಾಡಿದ್ದಾರೆ. ಅಲ್ಲದೆ ಇದೇ ವೇಳೆ ಕೊರೊನಾ ವೈರಸ್ ಕುರಿತು ಜಾಗೃತಿ ಕೂಡ ಮೂಡಿಸಿದ್ದಾರೆ. ಇದನ್ನೂ ಓದಿ: ಬಿಗ್‍ಬಾಸ್ ಮನೆಯಲ್ಲಿ ಸಂಚಾರಿ ವಿಜಯ್ ಸ್ಮರಣೆ ಮಾಡಿದ ಸ್ಪರ್ಧಿಗಳು

ವೀಡಿಯೋದಲ್ಲಿ ಹೇಳಿದ್ದೇನು..?
ನನ್ನ ಹುಟ್ಟುಹಬ್ಬಕ್ಕಿಂತ ನಿಮ್ಮೆಲ್ಲರ ಆರೋಗ್ಯ ನನಗೆ ಮುಖ್ಯ. ದೇವರ ದಯೆಯಿಂದ ಕೊರೊನಾ ಕಡಿಮೆಯಾಗಿದೆ. ಹಾಗಂತ ನಾವು ಎಚ್ಚರಿಕೆಯಿಂದ ಇರಬೇಕಾದ ಸಮಯ ಇನ್ನೂ ಮುಗಿದಿಲ್ಲ. ಮುಂದೆ ಇನ್ನೂ ಎಚ್ಚರಿಕೆಯಿಂದ ಇರಬೇಕಾಗಿದೆ. ನಿಮಗೆಲ್ಲರಿಗೂ ಗೊತ್ತಿರುವಂತೆ ಜುಲೈ 12ರಂದು ನನ್ನ ಹುಟ್ಟಿದ ದಿನ. ಕಾರಣಾಂತರಗಳಿಂದ ನಾನು ಬೆಂಗಳೂರಿನಲ್ಲಿ ಇರಲ್ಲ. ದಯವಿಟ್ಟು ಯಾರೂ ಬೇಜಾರು ಮಾಡಿಕೊಳ್ಳಬೇಡಿ. ನಿಮಗೆಷ್ಟು ಬೇಜಾರಾಗುತ್ತೋ ಅಷ್ಟೇ ಬೇಜಾರು ನನಗೂ ಆಗುತ್ತೆ. ಸೋಶಿಯಲ್ ಮೀಡಿಯಾ ಮುಖಾಂತರ ವಿಶ್ ತಿಳಿಸಿ. ನಿಮ್ಮ ಪ್ರೀತಿ, ಪ್ರೋತ್ಸಾಹ ಹಾಗೂ ಆಶೀರ್ವಾದ ನನಗೆ ಯಾವಾಗಲೂ ಇರಬೇಕು ಎಂದು ಬಯಸುತ್ತೇನೆ ಎಂದು ಹೇಳಿದ್ದಾರೆ.

blank

ಇದೇ ವೇಳೆ ದಯವಿಟ್ಟು ಎಲ್ಲರೂ ಕೊರೊನಾ ನಿಯಮಗಳನ್ನು ಪಾಲಿಸಿ. ಎಲ್ಲೇ ಹೋದರೂ ಮಾಸ್ಕ್ ಹಾಕಿಕೊಳ್ಳಿ. ಸಾಮಾಜಿಕ ಅಂತರ ಕಾಪಾಡಿಕೊಳ್ಳಿ. ಕೊರೊನಾ ಲಸಿಕೆ ಪಡೆದುಕೊಳ್ಳಿ. ಆದಷ್ಟು ಬೇಗ ಕೊರೊನಾ ಕಡಿಮೆಯಾಗಿ ನಾವೆಲ್ಲರೂ ಒಟ್ಟು ಸೇರುವಂತೆ ದೇವರಲ್ಲಿ ಪ್ರಾರ್ಥಿಸುವುದಾಗಿ ಶಿವಣ್ಣ ಹೇಳಿದ್ದಾರೆ.

The post ಜು.12 ರಂದು ಯಾರೂ ಮನೆಯ ಬಳಿ ಬರಬೇಡಿ: ಶಿವಣ್ಣ ಮನವಿ appeared first on Public TV.

Source: publictv.in

Source link