ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಕೈ ನಾಯಕರನ್ನ ವಶಕ್ಕೆ ಪಡೆದ ಪೊಲೀಸರು

ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಕೈ ನಾಯಕರನ್ನ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಇಂಧನ ಬೆಲೆ ಏರಿಕೆ ಖಂಡಿಸಿ ಇಂದು ನಗರದಲ್ಲಿ ಕಾಂಗ್ರೆಸ್​ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಕಾಂಗ್ರೆಸ್​ ನಾಯಕರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಿಂದ ಸೈಕಲ್ ಜಾಥಾ ಆರಂಭಿಸಲಾಯ್ತು. ಬಳಿಕ ಕೆಪಿಸಿಸಿ ಕಚೇರಿ ಮುಂದಿನ ಕ್ವಿನ್ಸ್ ರಸ್ತೆಯಲ್ಲಿ ಪೊಲೀಸರು ಪ್ರತಿಭಟನಾಕಾರರನ್ನ ತಡೆದು, ಸೈಕಲ್ ಜಾಥ ನಿಲ್ಲಿಸುವಂತೆ ಮನವಿ ಮಾಡಿದರು. ಸೈಕಲ್‌ ಜಾಥದಿಂದಾಗಿ ಅಂಬ್ಯುಲೆನ್ಸ್​ ಮುಂದೆ ಸಾಗಲು ದಾರಿ ಸಿಗದೆ ಕೆಲ ಹೊತ್ತು ಅಡ್ಡಿ ಉಂಟಾಗಿತ್ತು. ಕೂಡಲೇ ಪೊಲೀಸರು ಬಂದು ಅಂಬ್ಯುಲೆನ್ಸ್ ಗೆ ದಾರಿ ಮಾಡಿಕೊಟ್ಟರು.

ಬಳಿಕ ರಾಮಲಿಂಗಾರೆಡ್ಡಿ,  ಸಲೀಂ ಅಹಮದ್ ಹಾಗೂ ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಕಾಂಗ್ರೆಸ್​ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು. ಅರ್ಧ ತಾಸಿಗೆ ಕಾಂಗ್ರೆಸ್ ಸೈಕಲ್ ಜಾಥಾ ಮುಕ್ತಾಯಗೊಂಡಿತು.

The post ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಕೈ ನಾಯಕರನ್ನ ವಶಕ್ಕೆ ಪಡೆದ ಪೊಲೀಸರು appeared first on News First Kannada.

Source: newsfirstlive.com

Source link