ಕೇಂದ್ರ ಸಚಿವ ಸ್ಥಾನಕ್ಕೆ ಡಿ.ವಿ ಸದಾನಂದ ಗೌಡ ರಾಜೀನಾಮೆ

ಕೇಂದ್ರ ಸಚಿವ ಸ್ಥಾನಕ್ಕೆ ಡಿ.ವಿ ಸದಾನಂದ ಗೌಡ ರಾಜೀನಾಮೆ

ಕೇಂದ್ರ ಸಚಿವ ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಇಂದು ಮಹತ್ವದ ಬೆಳವಣಿಗೆ ನಡೆದಿದ್ದು, ಕೇಂದ್ರ ಸಚಿವರಾಗಿರುವ ಡಿ.ವಿ ಸದಾನಂದ ಗೌಡ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಮೊದಲೇ ನ್ಯೂಸ್​ ಫಸ್ಟ್​ ನೀಡಿದ ಮಾಹಿತಿಯಂತೆಯೇ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾಗಿರುವ ಡಿ.ವಿ‌. ಸದಾನಂದಗೌಡ ರಾಜೀನಾಮೆ ಸಲ್ಲಿಸಿದ್ದಾರೆ.

ಡಿ.ವಿ‌. ಸದಾನಂದಗೌಡರಿಗೆ ರಾಜ್ಯ ರಾಜಕಾರಣದ್ತ ಗಮನ ಹರಿಸುವಂತೆ ವರಿಷ್ಠರು ಸೂಚಿಸಿದ್ದಾರಂತೆ. ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದು, ಅವರ ಸ್ಥಾನಕ್ಕೆ ಒಕ್ಕಲಿಗ ಸಮುದಾಯದವರೇ ಆದ ಶೋಭಾ ಕರಂದ್ಲಾಜೆ ಆಯ್ಕೆಯಾಗುವ ಸಾಧ್ಯತೆ ಇದೆ.

 

The post ಕೇಂದ್ರ ಸಚಿವ ಸ್ಥಾನಕ್ಕೆ ಡಿ.ವಿ ಸದಾನಂದ ಗೌಡ ರಾಜೀನಾಮೆ appeared first on News First Kannada.

Source: newsfirstlive.com

Source link