ವಿಜಯಪುರದಲ್ಲಿ ಮಳೆಯ ಆರ್ಭಟ

ವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ನಾಲ್ಕು ದಿನಗಳಿಂದ ಬಿಡುವು ನೀಡಿದ್ದ ವರುಣ ಇಂದು ಅಬ್ಬರಿಸಿ ಬೊಬ್ಬಿರಿದಿದ್ದಾನೆ.

ಬಿಸಿಲ ನಾಡು ವಿಜಯಪುರ ಜಿಲ್ಲೆಯಾದ್ಯಂತ ವರಣುನ ಆರ್ಭಟ ಜೋರಾಗಿದೆ. ಬೆಳಗ್ಗೆಯಿಂದ ಒಂದೇ ಸಮನೆ ಮಳೆ ಸುರಿಯುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಬಿರುಗಾಳಿ ಸಹಿತ ಭಾರೀ ಮಳೆಗೆ ಜನ ತತ್ತರಿಸಿದ್ದಾರೆ. ಇದನ್ನೂ ಓದಿ: ಲಾರಿ ಹರಿದು ಕಾರ್ಮಿಕ ಮಹಿಳೆ ಸಾವು

ಬಿತ್ತನೆ ಕಾರ್ಯ ಮುಗಿಸಿ ಮಳೆಗಾಗಿ ಕಾಯುತ್ತಿದ್ದ ರೈತರು ಸಂತಸಗೊಂಡಿದ್ದಾರೆ. ಭರ್ಜರಿ ಮಳೆಯಾಗಿದ್ದು, ಬಿತ್ತನೆ ಮಾಡಿದ ಬೆಳೆಗೆ ಅನುಕೂಲವಾಗಲಿದೆ ಎಂದು ಹೇಳುತ್ತಿದ್ದಾರೆ. ಇಂದು ಬೆಳಗ್ಗೆಯಿಂದಲೂ ಬಿರಗಾಳಿ ಸಹಿತ ಒಂದೇ ಸಮನೆ ಮಳೆ ಸುರಿಯುತ್ತಿದೆ.

The post ವಿಜಯಪುರದಲ್ಲಿ ಮಳೆಯ ಆರ್ಭಟ appeared first on Public TV.

Source: publictv.in

Source link