ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದ ರೇಸ್​​ನಲ್ಲಿ ಅಣ್ಣಾಮಲೈ

ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದ ರೇಸ್​​ನಲ್ಲಿ ಅಣ್ಣಾಮಲೈ

ಚೆನ್ನೈ: ಬಿಜೆಪಿಯ ತಮಿಳುನಾಡು ಘಟಕದ ಅಧ್ಯಕ್ಷ ಸ್ಥಾನಕ್ಕೆ ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಹೆಸರು ಮುಂಚೂಣಿಯಲ್ಲಿದೆ.

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅಣ್ಣಾಮಲೈ ಅರವಕುರಿಚಿ ಕ್ಷೇತ್ರದಿಂದ ಸ್ಪರ್ಧಿಸಿ, ಪರಾಭವಗೊಂಡಿದ್ದರು. ಎಲ್‌.ಮುರುಗನ್‌ ಕೇಂದ್ರ ಸಂಪುಟದಲ್ಲಿ ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ರಾಜ್ಯ ಘಟಕದ ಚುಕ್ಕಾಣಿ ಯಾರು ಹಿಡಿಯಲಿದ್ದಾರೆ ಎಂಬ ಚರ್ಚೆ ಪಕ್ಷದಲ್ಲಿ ಆರಂಭವಾಗಿದೆ.

ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಜೊತೆಗೆ ಎಐಎಡಿಎಂಕೆ ತೊರೆದು ಬಿಜೆಪಿ ಸೇರಿ ಶಾಸಕರಾಗಿರುವ ಎನ್‌.ನಾಗೇಂದ್ರನ್‌ ಹೆಸರೂ ಕೂಡ ಚಾಲ್ತಿಯಲ್ಲಿದೆ.

The post ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದ ರೇಸ್​​ನಲ್ಲಿ ಅಣ್ಣಾಮಲೈ appeared first on News First Kannada.

Source: newsfirstlive.com

Source link