KRS ಡ್ಯಾಂ ಬಿರುಕು ವಿಚಾರ: ಪರೋಕ್ಷವಾಗಿ ಸುಮಲತಾ ವಿರುದ್ಧ ಪ್ರತಾಪ್ ಸಿಂಹ ಕಿಡಿ

KRS ಡ್ಯಾಂ ಬಿರುಕು ವಿಚಾರ: ಪರೋಕ್ಷವಾಗಿ ಸುಮಲತಾ ವಿರುದ್ಧ ಪ್ರತಾಪ್ ಸಿಂಹ ಕಿಡಿ

ಮೈಸೂರು: ಕೆಆರ್‌ಎಸ್ ಜಲಾಶಯ ಬಿರುಕು ಬಿಟ್ಟಿದೆ ಎಂಬ ಚರ್ಚೆ ವಿಚಾರವಾಗಿ ಮೈಸೂರು ಸಂಸದ ಪ್ರತಾಪ್ ಸಿಂಹ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಪರ ಬ್ಯಾಟಿಂಗ್ ಮಾಡಿದ್ದಾರೆ. ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ಕೆಆರ್​ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ ಎಂದು ಅಧಿಕಾರಿಗಳೇ ತಿಳಿಸಿದ್ದಾರೆ. ಅಂಥದ್ರಲ್ಲಿ ಡ್ಯಾಂ ಬಿರುಕು ಬಿಟ್ಟಿದೆ ಅನ್ನೋದು ಸರಿಯಲ್ಲ ಎಂದರು.

ಕೆಆರ್​ಎಸ್ ಅಧಿಕಾರಿಗಳ ಜೊತೆ ನಾನು ಮಾತನಾಡಿದ್ದೇನೆ. ಅಲ್ಲಿ ಯಾವುದು ಸಮಸ್ಯೆ ಇಲ್ಲ. ಅಲ್ಲಿಯ ಅಧಿಕಾರಿಗಳೇ ನನಗೆ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ ಕೂಡ ಮೈಸೂರು-ಬೆಂಗಳೂರು ದಶಪಥ ರಸ್ತೆ ಮಾಡುವುದಕ್ಕೂ ಬಿಡಲಿಲ್ಲ. ಸುಳ್ಳು ನೆಪಗಳನ್ನ ಹೇಳಿ ಕೆಲಸ ಮಾಡಲು ಅಡ್ಡಿಪಡಿಸಿದ್ರು ಅಂತ ಪರೋಕ್ಷವಾಗಿ ಸಂಸದೆ ಸುಮಲತಾಗೆ ಪ್ರತಾಪ್ ಸಿಂಹ ಟಾಂಗ್ ಕೊಟ್ಟರು.

ಇದೇ ವೇಳೆ, ಅಕ್ರಮ ಗಣಿಗಾರಿಕೆ ಸ್ಥಳಗಳಲ್ಲಿ ಸುಮಲತಾಗೆ ಅಡ್ಡಿಪಡಿಸಲಾಗಿದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ಅವರ ಹೇಳಿಕೆಯನ್ನೇ ಮಾಧ್ಯಮದವರು ಸತ್ಯ ಎಂದು ಭಾವಿಸಬೇಡಿ. ಸತ್ಯದ ಆಳಕ್ಕೆ ಹೋಗಿ ತಿಳಿದುಕೊಳ್ಳುವ ಮನಸ್ಥಿತಿ ಇರಬೇಕಾಗುತ್ತದೆ. ರಾಜಕೀಯವಾಗಿ ಯಾರು ಏನ್ ಬೇಕಾದರೂ ಹೇಳಿಕೆ ಕೊಡಬಹುದು. ಯಾರು ಕೂಡ ಎಲ್ಲಿಯೂ ಅಡ್ಡಿಪಡಿಸಿಲ್ಲ. ಇದೊಂದು ರಾಜಕೀಯ ಅಷ್ಟೇ ಎಂದು ಹೇಳಿದರು.

 

The post KRS ಡ್ಯಾಂ ಬಿರುಕು ವಿಚಾರ: ಪರೋಕ್ಷವಾಗಿ ಸುಮಲತಾ ವಿರುದ್ಧ ಪ್ರತಾಪ್ ಸಿಂಹ ಕಿಡಿ appeared first on News First Kannada.

Source: newsfirstlive.com

Source link