ಜುಲೈ 19, 22 ರಂದು SSLC ಪರೀಕ್ಷೆ: ವಿದ್ಯಾರ್ಥಿಗಳಿಗೆ ಧೈರ್ಯ ತುಂಬಲು ಮುಂದಾದ ಶಿಕ್ಷಣ ಸಚಿವರು

ಜುಲೈ 19, 22 ರಂದು SSLC ಪರೀಕ್ಷೆ: ವಿದ್ಯಾರ್ಥಿಗಳಿಗೆ ಧೈರ್ಯ ತುಂಬಲು ಮುಂದಾದ ಶಿಕ್ಷಣ ಸಚಿವರು

ಬೆಂಗಳೂರು: ಜುಲೈ 19 ಮತ್ತು 22ರಂದು ಎಸ್​ಎಸ್​ಎಲ್​ಸಿ ಪರೀಕ್ಷೆಗಳು ನಡೆಯಲಿವೆ. ಈ ಹಿನ್ನೆಲೆ ಇಂದು ಎಸ್​ಎಸ್​ಎಲ್​ಸಿ ಪರೀಕ್ಷಾರ್ಥಿಗಳೊಂದಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಂವಾದ ಕಾರ್ಯಕ್ರಮ ನಡೆಸಲಿದ್ದಾರೆ.

‘ಬನ್ನಿ ವಿದ್ಯಾರ್ಥಿಗಳೇ SSLC ಪರೀಕ್ಷೆಯನ್ನ ಆತ್ಮಸ್ಥೈರ್ಯದಿಂದ ಬರೆಯೋಣ’ ಎಂಬ ಶೀರ್ಷಿಕೆ ಅಡಿ ಸಂವಾದ ಕಾರ್ಯಕ್ರಮ ನಡೆಯಲಿದೆ. ಇವತ್ತು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರವರೆಗೆ ಕಾರ್ಯಕ್ರಮ ನಡೆಯಲಿದೆ. ಈ ಸಂವಾದ ಕಾರ್ಯಕ್ರಮ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ನಡೆಯಲಿದ್ದು, ಆಯಾ ಜಿಲ್ಲೆಯ ಡಯಟ್ ಮತ್ತು ಡಿ.ಡಿ.ಪಿ.ಐ ಅಧಿಕಾರಿಗಳು ಭಾಗಿ ಆಗಲಿದ್ದಾರೆ.

blank

ಕೊರೊನಾ ಸೋಂಕಿನ ಆತಂಕದ ಮಧ್ಯೆಯೂ ರಾಜ್ಯ ಸರ್ಕಾರ ಎಸ್​ಎಸ್ಎಲ್​ಸಿ ಮಕ್ಕಳಿಗೆ ಪರೀಕ್ಷೆ ಬರೆಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗೃತ ಕ್ರಮವನ್ನ ಸರ್ಕಾರ ತೆಗೆದುಕೊಂಡಿದೆ. ಹೀಗಿದ್ದರೂ ಪೋಷಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಭಯದ ಜೊತೆಗೆ ಕೊರೊನಾ ಭಯ ಕೂಡ ಇರೋದ್ರಿಂದ ಶಿಕ್ಷಣ ಸಚಿವರು ವಿದ್ಯಾರ್ಥಿಗಳ  ಜೊತೆ ಸಂವಾದ ನಡೆಸಿ ಧೈರ್ಯ ತುಂಬಲಿದ್ದಾರೆ.

The post ಜುಲೈ 19, 22 ರಂದು SSLC ಪರೀಕ್ಷೆ: ವಿದ್ಯಾರ್ಥಿಗಳಿಗೆ ಧೈರ್ಯ ತುಂಬಲು ಮುಂದಾದ ಶಿಕ್ಷಣ ಸಚಿವರು appeared first on News First Kannada.

Source: newsfirstlive.com

Source link