ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಟಿವಿಯಿಂದ ಉಚಿತ ಟ್ಯಾಬ್ ವಿತರಣೆ

ರಾಯಚೂರು: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಟಿವಿಯ ಜ್ಞಾನದೀವಿಗೆ ಕಾರ್ಯಕ್ರಮದ ಮೂಲಕವಾಗಿ ರಾಯಚೂರಿನಲ್ಲಿ ಉಚಿತ ಟ್ಯಾಬ್ ವಿತರಣೆ ಮಾಡಲಾಯಿತ್ತು. ಇದನ್ನೂ ಓದಿ: ಅಂಬಿ-ಸುಮಲತಾ ಬಗ್ಗೆ ಮಾತಾಡಿದ್ರೆ ಹುಷಾರ್-ಅಂಬಿ ಅಭಿಮಾನಿಗಳಿಂದ ಎಚ್ಚರಿಕೆ

ಲಿಂಗಸುಗೂರು ತಾಲೂಕಿನ ಚಿಕ್ಕಲೆಕ್ಕಿಹಾಳ ಪ್ರೌಢಶಾಲೆಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಲಾಯಿತು. ರೋಟರಿ ಇಂಟನ್ರ್ಯಾಷನಲ್ ಸಹಯೋಗದೊಂದಿಗೆ ಶಾಲೆಯ 19 ವಿದ್ಯಾರ್ಥಿ ವಿದ್ಯಾರ್ಥಿಗಳಿಗೆ 9 ಟ್ಯಾಬ್‍ಗಳನ್ನ ವಿತರಿಸಲಾಯಿತು. ಲಿಂಗಸುಗೂರು ತಾಲೂಕಿನಲ್ಲಿ ಇದುವರೆಗೆ ಒಟ್ಟು 200 ಟ್ಯಾಬ್‍ಗಳನ್ನ ವಿತರಿಸಲಾಗಿದೆ. ಇದನ್ನೂ ಓದಿ: ನಮ್ಮ ತಂದೆಯ ಸಾವನ್ನು ರಾಜಕೀಯ ಮಾಡಬೇಡಿ: ಅಭಿಷೇಕ್ ಅಂಬರೀಶ್

ಹಟ್ಟಿ ಚಿನ್ನದಗಣಿ ನಿಗಮ ನಿಯಮಿತ ಅಧ್ಯಕ್ಷ ಮಾನಪ್ಪ ವಜ್ಜಲ್ ನೀಡಿರುವ ಟ್ಯಾಬ್‍ಗಳನ್ನ ವಿದ್ಯಾರ್ಥಿಗಳಿಗೆ ನೇರವಾಗಿ ವಿತರಿಸಲಾಯಿತು. ಮಾನಪ್ಪ ವಜ್ಜಲ್ ಪುತ್ರ ಈಶ್ವರ ವಜ್ಜಲ್ ಮಕ್ಕಳಿಗೆ ಟ್ಯಾಬ್‍ಗಳನ್ನ ವಿತರಿಸಿದರು. ಕಾರ್ಯಕ್ರಮದಲ್ಲಿ ವೀರನಗೌಡ ಚಿಕ್ಕಲೆಕ್ಕಿಹಾಳ, ಶಾಲೆಯ ಮುಖ್ಯೋಪಾಧ್ಯಾಯ ಚಾರುನಾಯಕ್ ರಾಥೋಡ್ ಎಸ್‍ಡಿಎಂಸಿ ಸದಸ್ಯರು, ಸಹ ಶಿಕ್ಷಕರು ಭಾಗವಹಿಸಿದ್ದರು.

blank

The post ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಟಿವಿಯಿಂದ ಉಚಿತ ಟ್ಯಾಬ್ ವಿತರಣೆ appeared first on Public TV.

Source: publictv.in

Source link