ರಾಜ್ಯದಲ್ಲಿ ಇಂದಿನಿಂದ ಜು.13ರವರೆಗೆ ವ್ಯಾಪಕ ಮಳೆ ಸಾಧ್ಯತೆ- 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​

ರಾಜ್ಯದಲ್ಲಿ ಇಂದಿನಿಂದ ಜು.13ರವರೆಗೆ ವ್ಯಾಪಕ ಮಳೆ ಸಾಧ್ಯತೆ- 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜು.13ರವರೆಗೆ ವ್ಯಾಪಕ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್​​. ಪಾಟೀಲ್ ಮಾಹಿತಿ ನೀಡಿದ್ದಾರೆ.

ಇಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಉಳಿದಂತೆ ಪಣಂಬೂರು, ಕೋಲಾರ, ಕೊಪ್ಪಳ ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ಬಂಗಾಲ ಉಪಸಾಗರ ಮಧ್ಯ ಭಾಗದಲ್ಲಿ ಜು. 11ರಂದು ವಾಯುಭಾರ ಕುಸಿತವಾಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಕರಾವಳಿ, ದಕ್ಷಿಣ, ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜು. 9, 10, 13 ಆರೆಂಜ್ ಅಲರ್ಟ್​, ಜು. 11, 12ರಂದು ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ.

blank

ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬಿಜಾಪುರ, ಯಾದಗಿರಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸೂಚನೆ ಇದ್ದು, ಜು.9 ರಿಂದ 13ರ ವರೆಗೂ ಆರೆಂಜ್ ಅಲರ್ಟ್​ ನೀಡಲಾಗಿದೆ. ಉಳಿದಂತೆ ಬೆಂಗಳೂರಿನಲ್ಲಿ ಇನ್ನೂ 2 ದಿನ ಸಾಧಾರಣ ಮಳೆಯಾಗುವ ಮುನ್ಸೂಚನೆ ಹೆಚ್ಚಿನ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

blank

The post ರಾಜ್ಯದಲ್ಲಿ ಇಂದಿನಿಂದ ಜು.13ರವರೆಗೆ ವ್ಯಾಪಕ ಮಳೆ ಸಾಧ್ಯತೆ- 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ appeared first on News First Kannada.

Source: newsfirstlive.com

Source link