ಸತ್ಯದ ಪರವಾಗಿ ನಿಂತಾಗ, ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ: ಸುಮಲತಾ

ಬೆಂಗಳೂರು: ಕೆಲವರು ಮಹಿಳೆಯರು ಅಧಿಕಾರದಲ್ಲಿರುವುದನ್ನು ಸಹಿಸಿಕೊಳ್ಳಲಾರರು. ಸತ್ಯದ ಪರವಾಗಿ ನಿಂತಾಗ ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ ಎಂದು ಸಂಸದೆ ಸುಮಲತಾ ಅಂಬರೀಶ್ ಟ್ವೀಟ್ ಮಾಡಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ:
ಸತ್ಯದ ಪರವಾಗಿ ನಿಂತಾಗ, ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ. ಕೆಲವರು ಮಹಿಳೆಯರು ಅಧಿಕಾರದಲ್ಲಿರುವುದನ್ನು ಸಹಿಸಿಕೊಳ್ಳಲಾರರು. ಭ್ರಷ್ಟರು, ನಿಷ್ಠಾವಂತ ಅಧಿಕಾರಿಗಳಿಗೆ ವರ್ಗಾವಣೆ, ಒತ್ತಡ, ಕಿರುಕುಳ ಕೊಡಬಲ್ಲರು. ಪಾಪ ಸಂಸದರನ್ನು ವರ್ಗಾವಣೆ ಮಾಡಲು ಬರುವುದಿಲ್ಲ ಎಂದು ಟ್ವೀಟ್ ಮಾಡುವ ಮೂಲಕವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ನಿವಾಸಕ್ಕೆ ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಮುಂದಾಗಿದ್ದು, ಆಕ್ರೋಶ ಹೊರ ಹಾಕುತ್ತಿದ್ದಾರೆ. ನಿನ್ನೆ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆ ಇಂದು ರಾಕ್‍ಲೈನ್ ವೆಂಕಟೇಶ್ ನಿವಾಸದ ಮುಂದೆ ಅಪಾರ ಪ್ರಮಾಣದ ಕಾರ್ಯಕರ್ತರು ಸೇರ್ಪಡೆಯಾಗಿದ್ದರು. ಜೆಡಿಎಸ್ ಕಾರ್ಯಕರ್ತರ ಮುತ್ತಿಗೆ ಹಿನ್ನೆಲೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‍ನಲ್ಲಿರುವ ರಾಕ್‍ಲೈನ್ ವೆಂಕಟೇಶ್ ನಿವಾಸಕ್ಕೆ ಪೊಲೀಸ್ ಭದ್ರತೆ ನೀಡಲಾಗಿದೆ. ಕೆಎಸ್‍ಆರ್‍ಪಿ ಪೊಲೀಸರು, ಸ್ಥಳೀಯ ಠಾಣೆಯ ಪೊಲೀಸರ ನಿಯೋಜನೆ ಮಾಡಲಾಗಿದ್ದು, ರಾಕ್‍ಲೈನ್ ಮನೆ ಸಂಪರ್ಕಿಸುವ ರಸ್ತೆಗೆ ಬ್ಯಾರಿಕೇಡ್ ಹಾಕಲಾಗಿದೆ. ಇದನ್ನೂ ಓದಿ:  ಮಾತಾಡುವ ಸ್ವಾತಂತ್ರ್ಯ ಕೆಲವರಿಗೆ ಮಾತ್ರ ಇದೆಯಾ?: ರಾಕ್‍ಲೈನ್ ವೆಂಕಟೇಶ್

blank

ರೆಬೆಲ್ ಸ್ಟಾರ್ ಅಂಬರೀಶ್ ಬಗ್ಗೆ ನಮಗೂ ಅಭಿಮಾನವಿದೆ. ಕುಮಾರಸ್ವಾಮಿ ಬಗ್ಗೆ ಮಾತಾಡೋಕೆ ನೀವು ಯಾರು? ನೀವು ಚಿತ್ರರಂಗದ ಬಗ್ಗೆ ಮಾತ್ರ ಮಾತನಾಡಿ. ಕುಮಾರಸ್ವಾಮಿ ಅವರ ಬಳಿ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾನಿರತ ಜೆಡಿಎಸ್ ಕಾರ್ಯಕರ್ತರು ಆಗ್ರಹಿಸಿದರು. ಸದ್ಯ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

The post ಸತ್ಯದ ಪರವಾಗಿ ನಿಂತಾಗ, ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ: ಸುಮಲತಾ appeared first on Public TV.

Source: publictv.in

Source link