ನಿಯಂತ್ರಣ ತಪ್ಪಿದ ಸರ್ಕಾರಿ ಬಸ್; ಕೂದಲೆಳೆಯಲ್ಲಿ ಪಾರಾದ 25 ಪ್ರಯಾಣಿಕರು

ನಿಯಂತ್ರಣ ತಪ್ಪಿದ ಸರ್ಕಾರಿ ಬಸ್; ಕೂದಲೆಳೆಯಲ್ಲಿ ಪಾರಾದ 25 ಪ್ರಯಾಣಿಕರು

ಚಿಕ್ಕಮಗಳೂರು: ತೀವ್ರ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್ಸೊಂದು ಹಳ್ಳಕ್ಕೆ ಬಿದ್ದ ಘಟನೆ ಮೂಡಿಗೆರೆಯಲ್ಲಿ ನಡೆದಿದೆ. ಇಂದು ಸರ್ಕಾರಿ ಬಸ್ಸೊಂದು ಮಂಗಳೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ವೇಳೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಚಾರ್ಮಾಡಿ ಘಾಟ್ ಸಮೀಪದ ದರ್ಬಾರ್ ಹೋಟೆಲ್ ಬಳಿ ಈ ಅವಘಡ ಸಂಭವಿಸಿದೆ.

ಸರ್ಕಾರಿ ಬಸ್​​ನಲ್ಲಿ 25 ಜನ ಪ್ರಯಾಣಿಸುತ್ತಿದ್ದರು. ಮಂಗಳೂರಿನಿಂದ ಚಿಕ್ಕಮಗಳೂರಿಗೆ ಬರುವ ಮಾರ್ಗ ಮಧ್ಯೆ ಬಸ್ ಚಾಲಕ ಎದುರಿಗೆ ಬಂದ ವಾಹನವೊಂದಕ್ಕೆ ಸೈಡ್ ಬಿಡಲು ಚಾಲಕ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಇಲ್ಲಿ ಜೋರು ಮಳೆಯಾಗುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಬಸ್ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ.

ಒಂದು ವೇಳೆ ಬಸ್ ಪಲ್ಟಿಯಾಗಿದ್ದರೆ ದೊಡ್ಡ ಅನಾಹುತವೇ ನಡೆದು ಹೋಗುತ್ತಿತ್ತು. ಆದರೀಗ, ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಸಂಬಂಧ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

The post ನಿಯಂತ್ರಣ ತಪ್ಪಿದ ಸರ್ಕಾರಿ ಬಸ್; ಕೂದಲೆಳೆಯಲ್ಲಿ ಪಾರಾದ 25 ಪ್ರಯಾಣಿಕರು appeared first on News First Kannada.

Source: newsfirstlive.com

Source link