ರಾಜ್ಯದಲ್ಲಿ 1.48% ಕೊರೊನಾ ಪಾಸಿಟಿವಿಟಿ; 2,162 ಮಂದಿಗೆ ಸೋಂಕು ದೃಢ

ರಾಜ್ಯದಲ್ಲಿ 1.48% ಕೊರೊನಾ ಪಾಸಿಟಿವಿಟಿ; 2,162 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಾದ್ಯಂತ ಇಂದು 32,099 ಱಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,13,567 ಆರ್​ಟಿಪಿಸಿಆರ್ ಟೆಸ್ಟ್​ಗಳೂ ಸೇರಿದಂತೆ ಒಟ್ಟು 1,45,666 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು 2,162 ಹೊಸ ಕೊರೊನಾ ಸೋಂಕು ಪ್ರಕರಣಗಳು ಬೆಳಕಿಗೆ ಬಂದಿವೆ. ಇನ್ನು ರಾಜ್ಯದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 28,69,320 ಕ್ಕೆ ಏರಿಕೆಯಾಗಿದೆ.

ಇಂದು 2,879 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ 27,96,377 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು 48 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು ಈವರೆಗೆ 35,779 ಮಂದಿ ಕೊರೊನಾಗೆ ಬಲಿಯಾದಂತಾಗಿದೆ. ಸದ್ಯ ರಾಜ್ಯದಲ್ಲಿ 37,141 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿ-ಅಂಶಗಳು ಹೇಳುತ್ತಿವೆ.

ಇನ್ನು ಬೆಂಗಳೂರು ನಗರದಲ್ಲಿ ಇಂದು 452 ಮಂದಿಗೆ ಕೊರೊನಾ ಪಾಸಿಟಿವ್ ಆಗಿದ್ದು ಚಿಕ್ಕಮಗಳೂರು 109, ದಕ್ಷಿಣ ಕನ್ನಡ 218, ಹಾಸನ 178, ಕೊಡಗು 108, ಮೈಸೂರು 211, ಶಿವಮೊಗ್ಗ 110 ಹಾಗೂ ಉಡುಪಿ ಜಿಲ್ಲೆಯಲ್ಲಿ 113 ಮಂದಿಗೆ ಕೊರೊನಾ ಪಾಸಿಟಿವ್ ಆಗಿದೆ.

blank

The post ರಾಜ್ಯದಲ್ಲಿ 1.48% ಕೊರೊನಾ ಪಾಸಿಟಿವಿಟಿ; 2,162 ಮಂದಿಗೆ ಸೋಂಕು ದೃಢ appeared first on News First Kannada.

Source: newsfirstlive.com

Source link